Featured
ರಾಜಸ್ಥಾನ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್- ಸ್ಪೀಕರ್ ನಿರ್ಧಾರ ಬಳಿಕ ಹೈಕೋರ್ಟ್ ಮಧ್ಯ ಪ್ರವೇಶ- ಪೈಲಟ್ ಮತ್ತು ಬೆಂಬಲಿಗರ ಮುಂದಿನ ನಡೆ ಏನು..?
![](https://risingkannada.com/wp-content/uploads/2020/07/SACHIN-PILOT-2.jpg)
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ರಾಜಸ್ಥಾನ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಸಮರ ಸಾರಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ 18 ಬೆಂಬಲಿಗ ಶಾಸಕರ ನಡುವೆ ಜಂಗೀಕುಸ್ತಿ ಜೋರಾಗಿ ನಡೆಯುತ್ತಿದೆ. ಇತ್ತ ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಷಿ ಸಚಿನ್ ಪೈಲಟ್ ಮತ್ತು ಬೆಂಬಲಿಗರಿಗೆ ಅನರ್ಹತೆ ನೋಟಿಸ್ ನೀಡಿದೆ. ಸ್ಪೀಕರ್ ನೋಟಿಸ್ ವಿರುದ್ಧ ರಾಜಸ್ಥಾನ ಹೈಕೋರ್ಟ್ ಮೆಟ್ಟಲೇರಿದ್ದ ಸಚಿನ್ ಪೈಲಟ್ ಮತ್ತು ಬೆಂಬಲಿಗರಿಗೆ ಹಿನ್ನಡೆಯಾಗಿದೆ. ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸ್ಪೀಕರ್ ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಈ ಮೂಲಕ ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಸ್ಪೀಕರ್ ವಿವೇಚನೆಗೆ ಹೈಕೋರ್ಟ್ ವರ್ಗಾಯಿಸಿದೆ.
ಮಾಜಿ ಡಿಸಿಎಂ ಸಚಿನ್ ಪೈಲಟ್ ಹಾಗೂ 18 ಅತೃಪ್ತ ಕಾಂಗ್ರೆಸ್ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಶಾಂತ್ ಗುಪ್ತಾ ಅವರ ದ್ವಿಸದಸ್ಯ ಪೀಠ ಮೊದಲು ಸ್ಪೀಕರ್ ನಿರ್ಧಾರ ತಿಳಿಸಲಿ ಎಂದು ಹೇಳಿದ್ದಾರೆ. ಇನ್ನು, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಷಿ ಪರ ವಾದ ಮಂಡನೆ ಮಾಡಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸ್ಪೀಕರ್ ಮತ್ತು ವಿಧಾನಸಭೆ ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದು, ಸ್ಪೀಕರ್ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಮುಂಚೆ ನ್ಯಾಯಾಲಯ ಮಧ್ಯಪ್ರವೇಶಿಸಲೂ ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.
ಸಚಿನ್ ಪೈಲಟ್ ಮತ್ತು ತಂಡದ ಪರ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ವಾದಿಸುತ್ತಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದ ಕೋರ್ಟ್ ಮಂಗಳವಾರದವರೆಗೂ ಪೈಲಟ್ ಮತ್ತು ಇತರ ಶಾಸಕರ ಮೇಲೆ ಯಾವುದೇ ಕ್ರಮ ಜರುಗಿಸಬಾರದು ಎಂದು ಹೇಳಿ ವಿಚಾರಣೆ ಮುಂದೂಡಿತ್ತು. ಕಳೆದ ಭಾನುವಾರದಿಂದಲೂ ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗ ಶಾಸಕರು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಜೊತೆಗೆ ಜುಲೈ 13-14ರಂದು ನಡೆದ ಸಿಎಲ್‌ಪಿ ಸಭೆಗೆ ಹಾಜರಾಗಿಲ್ಲ ಎಂದು ಅತೃಪ್ತರ ಮೇಲೆ ಅನರ್ಹತೆ ಅಸ್ತ್ರ ಪ್ರಯೋಗಕ್ಕೆ ಸ್ಪೀಕರ್ ಮುಂದಾಗಿ ನೋಟಿಸ್ ನೀಡಿದ್ದರು.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?