Featured
ಕೊರೊನಾ ನಡುವೆಯೂ SSLC ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದ ಸರ್ಕಾರ – ಶನಿವಾರಕ್ಕೆ ಎಲ್ಲವೂ ಮುಕ್ತಾಯ – ಸಚಿವ ಸುರೇಶ್ ಕುಮಾರ್ ಪರಿಶ್ರಮಕ್ಕೆ ಶ್ಲಾಘನೆ..!

ರೈಸಿಂಗ್ ಕನ್ನಡ :
ಬೆಂಗಳೂರು :
ಆತಂಕದ ನಡುವೆಯೇ ಆರಂಭವಾದ SSLC ಪರೀಕ್ಷೆ ಕೊನೆ ಹಂತಕ್ಕೆ ಬಂದು ನಿಂತಿದೆ. ಶನಿವಾರಕ್ಕೆ ಎಲ್ಲಾ ಪರೀಕ್ಷೆಗಳು ಮುಕ್ತಾಯವಾಗಲಿವೆ. ಶುಕ್ರವಾರ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನ ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ 2,879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಲು ರಾಜ್ಯ ಸರ್ಕಾರ ಸಫಲವಾಗಿದೆ. ಒಟ್ಟು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 4,48, 560 ಬಾಲಕರು ಹಾಗೂ 3,99,643 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ 330 ಬ್ಲಾಕ್ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಯನ್ನ ಕೂಡ ಮಾಡಲಾಗಿತ್ತು. ರಾಜ್ಯದಲ್ಲಿ ಒಟ್ಟು 57 ಸೂಕ್ಷ್ಮ ಹಾಗೂ 4 ಅತೀ ಸೂಕ್ಷ್ಮ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 12,674 ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನ ಕೂಡ ರಾಜ್ಯ ಸರ್ಕಾರ ಮಾಡಿತ್ತು. ಜ್ವರ, ಕೆಮ್ಮು, ನೆಗಡಿ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನ ನಿಗಧಿಪಡಿಸಲಾಗಿತ್ತು. ಸಿಸಿಟಿವಿ ಕಣ್‌ಗಾವಲಿನಲ್ಲಿ ಪರೀಕ್ಷಾ ಕೇಂದ್ರಗಳಿದ್ದವು. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಗೆ ರಾಜ್ಯ ಸರ್ಕಾರ ಈ ಬಾರಿ ಪರೀಕ್ಷೆಯಲ್ಲಿ ಹೆಚ್ಚು ಒತ್ತು ನೀಡಿತ್ತು.
ಕಂಟೈನ್ಮೆಂಟ್ ಜೋನ್ ಗಳಲ್ಲಿ ಪರೀಕ್ಷಾ ಕೇಂದ್ರಗಳನ್ನ ರದ್ದು ಮಾಡಿ, ಅಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಪರೀಕ್ಷಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 144 ಹಾಗೂ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಈ ಬಾರಿ SSLC ಪರೀಕ್ಷೆ ತೆಗೆದುಕೊಂಡಿರುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ.
ಒಟ್ಟಿನಲ್ಲಿ ಕೊರೊನಾದಂತಹ ಮಹಾಮಾರಿ ಸಂದರ್ಭದಲ್ಲಿ SSLC ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲೇಬೇಕು. ಅದ್ರಲ್ಲೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಪರಿಶ್ರಮ ಮತ್ತು ಕಾಳಜಿಗೆ ಹ್ಯಾಟ್ಸ್ ಆಫ್ ಹೇಳಲೇಬೇಕು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?