Featured
ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶಕ್ಕೆ ಸಿದ್ಧತೆ – ರಾಮನಗರದಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ
ರೈಸಿಂಗ್ ಕನ್ನಡ :
ರಾಮನಗರ :
ಸಂಕಷ್ಟದ ಸಂದರ್ಭದಲ್ಲಿ ಯಾರ ಕೆಲಸಕ್ಕೂ ಕತ್ತರಿಬೀಳೋದು ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಸ್ವತಹ ಪ್ರಧಾನಿ ನರೇಂದ್ರ ಮೋದಿಯವರೆ ಈ ಕುರಿತು ಮಾತನಾಡಿದ್ದಾರೆ ಮಾನವೀಯತೆ ಆಧಾರದ ಮೇಲಾದ್ರೂ ಕೆಲಸದಲ್ಲಿ ಉಳಿಸಿಕೊಳ್ಳಿ ಎಂದಿದ್ದಾರೆ. ಕೊರೊನಾ ಮಹಾಮಾರಿ ಇಡೀ ಜಗತ್ತನ್ನೇ ಕಾಡುತ್ತಿದೆ. ಈ ಸಂದರ್ಭದಲ್ಲಿ ಯಾರಿಗೂ ಅನ್ಯಾಯವಾಗಬಾರದು ಎಂದಿದ್ದಾರೆ ಶಿಕ್ಷಣ ಸಚಿವರು.
ರಾಮನಗರದಲ್ಲಿ SSLC ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದ ಸಚಿವರು, ಖಾಸಗಿ ಶಾಲೆಗಳಲ್ಲಿ ಶಿಕ್ಷಕರನ್ನ ತೆಗೆಯಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಅಂತಹ ಕೆಲಸವನ್ನ ಮಾಡಬಾರದು, ಶಿಕ್ಷಣ ಸಂಸ್ಥೆಗಳು ನೌಕರರ ಹಿತ ಕಾಪಾಡಬೇಕು ಎಂದಿದ್ದಾರೆ.
ರಾಮನಗರದ ಹಲವು ಶಾಲೆಗಳಿಗೆ ಭೇಟಿ ಕೊಟ್ಟ ಸಚಿವರು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಡೆಸಲು ಕೈಗೊಂಡ ಮುಂಜಾಗೃತ ಕ್ರಮಗಳ ಬಗ್ಗೆ ಪರಿಶೀಲಿಸಿದ್ರು. ಇದೇ ವೇಳೆ ಮಾತನಾಡಿದ ಸಚಿವರು ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯುತ್ತಿದ್ದಾರೆ, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶದ ಬಗ್ಗೆ ಚಿಂತಿಸಿಲಾಗುತ್ತಿದೆ ಎಂದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?