Featured
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯಕ್ಕೆ ಪ್ರಥಮ
ರೈಸಿಂಗ್ ಕನ್ನಡ :
ಕಾರವಾರ:
ಕೊರೋನಾ ಆತಂಕದ ನಡುವೆ ನಡೆದಿದ್ದ ಎಸ್ಎಸ್ಎಲ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಆರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.
ಈ ಪೈಕಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಸನ್ನಿಧಿ ಮಹಾಬಲೇಶ್ವರ ಹೆಗಡೆ ಕೂಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆಯೊಂದಿಗೆ ಮತ್ತೆ ಐವರು ಕೂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
11 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದು, ಈ ಪೈಕಿ ಸಿದ್ದಾಪುರದ ಪ್ರಶಾಂತಿ ಇಂಗ್ಲಿಷ್ ಮೀಡಿಯಮ್ ಶಾಲೆಯ ಅನಿರುದ್ಧ್ ಸುರೇಶ್ ಗುಟ್ಟಿಕರ್ ದ್ವಿತೀಯ ರ್ಯಾಂಕ್ ಪಡೆದುಕೊಂಡಿದ್ದಾನೆ. 43 ಮಂದಿ 623, 56 ವಿದ್ಯಾರ್ಥಿಗಳು 622, 68 ಮಂದಿ 621 ಹಾಗೂ 117 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ. ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಈ ಬಾರಿ ಪ್ರಥಮ ಹಾಗೂ ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ಈ ಬಾರಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 ವಿದ್ಯಾರ್ಥಿಗಳು ಕೊರೋನಾ ಕಾರಣದಿಂದ ಗೈರು ಹಾಜರಾಗಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ಶೈಕ್ಷಣಿಕ ಜಿಲ್ಲೆಗಳ 227 ಕೇಂದ್ರಗಳಲ್ಲಿ 52,219 ಮೌಲ್ಯಮಾಪಕರು ಮೌಲ್ಯಮಾಪನ ನಡೆಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?