Featured
SSLC ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್- ಡಿಡಿಪಿಐಯಿಂದ ವಿದ್ಯಾರ್ಥಿಗಳ ಬಗ್ಗೆ ಸ್ಪಷ್ಟನೆ

ರೈಸಿಂಗ್ ಕನ್ನಡ:
ಮಂಜುನಾಥ ತಳವಾರ, ಬಾಗಲಕೋಟೆ

ಬಾಗಲಕೋಟೆಯಲ್ಲಿ ಕೊರೊನಾ ವಿದ್ಯಾರ್ಥಿಗಳನ್ನು ಕಾಡುತ್ತಿದೆ. SSLC ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಬಾಗಲಕೋಟೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇದ್ದಿದ್ದು ಪತ್ತೆಯಾಗಿದೆ ಅಂತ ಡಿಡಿಪಿಐ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ವೇಳೆ ಶೀತ, ನೆಗಡಿ, ಕೆಮ್ಮಿನ ಲಕ್ಷಗಳಿದ್ದವು. ಒಟ್ಟು ಏಳು ಜನ ವಿದ್ಯಾರ್ಥಿಗಳಲ್ಲಿ ಆ ಲಕ್ಷಣ ಕಾಣಿಸಿದ್ದವು. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಸದ್ಯ ಆ ಏಳು ಜನ ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಪಾಸಿಟವ್ ಕಂಡು ಬಂದಿದ್ದು, ಉಳಿದ ವಿದ್ಯಾರ್ಥಿಗಳಲ್ಲಿ ನೆಗಟಿವ್ ಇದೆ. ಪಾಸಿಟಿವ್ ಬಂದಿರುವ ಇಬ್ಬರು ವಿದ್ಯಾರ್ಥಿಗಳಿಗೆ ಉಳಿದ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಮುಂಬರುವ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಅದನ್ನು ಪೂರಕ ಪರೀಕ್ಷೆ ಎನ್ನದೇ ಮೊದಲ ಪರೀಕ್ಷೆ ಎಂದೇ ಪರಿಗಣಿಸಲಾಗಿತ್ತೆ ಅಂತಾ ಡಿಡಿಪಿಐ ಶ್ರೀಶೈಲ ಬಿರಾದಾರ ತಿಳಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















