Connect with us

Featured

ಡಿ.ಕೆ. ಸುರೇಶ್‌ಗೆ ಎಸ್‌.ಟಿ. ಸೋಮಶೇಖರ್‌ ವಾರ್ನಿಂಗ್‌ – ಮೋದಿ ತಾಕತ್ತು‌ ಜಗತ್ತಿಗೆ ಗೊತ್ತಿದೆ – ಲಿಮಿಟ್‌ ಮೀರಿ ಮಾತಾಡಿದ್ರೆ ಹುಷಾರ್‌..!

ಸಂಸದ ಡಿ.ಕೆ.ಸುರೇಶ್ ಅವರು ಮಾತನಾಡುವಾಗ ತಮ್ಮ ಮಿತಿ ಅರಿತು ಮಾತನಾಡಬೇಕು. ಚೀನಾ ವಸ್ತುಗಳನ್ನು ನಿಷೇಧಿಸುವ‌ ಕುರಿತು ಪ್ರಧಾನಿ ತಾಕತ್ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಮಾತನಾಡಿದ ಎಸ್‌.ಟಿ. ಸೋಮಶೇಖರ್‌, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಂಸದ ಡಿ.ಕೆ.ಸುರೇಶ್ ಲಘುವಾಗಿ, ಸವಾಲು ಎಸೆಯುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ. ಕಳೆದ ಮೂರು ತಿಂಗಳಿನಿಂದ ಪ್ರಧಾನಿ ಏನು ಮಾಡ್ತಿದಾರೆ, ಅವರ ತಾಕತ್ತು ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಚೀನಾ ವಸ್ತುಗಳ ಬಗ್ಗೆ ಪ್ರಧಾನಿಯಾಗಿ ಏನು ಮಾಡಬೇಕೊ, ಅದನ್ನ ಮಾಡೇ ಮಾಡ್ತಾರೆ. ಡಿ.ಕೆ.ಸುರೇಶ್ ಮಾತನ್ನ ಚಾಲೇಂಜ್ ಆಗಿ ಸ್ವೀಕಾರ ಮಾಡಬೇಕಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿಯಿಂದ ಎಚ್.ವಿಶ್ಬನಾಥ್‌ಗೆ ಅನ್ಯಾಯ ಎಂಬ ಕೃಷ್ಣ ಭೈರೇಗೌಡ ಹೇಳಿಕೆಗೆ ಸಿಡಿಮಿಡಿಗೊಂಡ ಸೋಮಶೇಖರ್‌, ಕೃಷ್ಣ ಭೈರೇಗೌಡಗೆ ಹಿಂದೆ ಗೊತ್ತಿಲ್ಲ, ಮುಂದೆ ಗೊತ್ತಿಲ್ಲ. ಏನೂ ಗೊತ್ತಿಲ್ಲದೇ ಏನೇನೋ ಮಾತಾಡ್ತಾರೆ ಎಂದು ಲೇವಡಿ ಮಾಡಿದರು. ರಾಜೀನಾಮೆ ನೀಡಿದ್ದ 17 ಶಾಸಕರ ಪೈಕಿ 10 ಜನರನ್ನು ಮಂತ್ರಿ ಮಾಡಿದ್ದಾರೆ. ವಿಶ್ವನಾಥ ಹೊರತುಪಡಿಸಿ ಎಂ.ಟಿ.ಬಿ.ನಾಗರಾಜ್, ಶಂಕರ್ ಅವರಿಗೆ ಎಂಎಲ್‌ಸಿ ಟಿಕೆಟ್ ನಿಗದಿಯಾಗಿದೆ. ಇನ್ನು‌ ಪ್ರತಾಪಗೌಡ ಪಾಟೀಲ್‌, ಮುನಿರತ್ನ ಚುನಾವಣೆಗೆ ಹೋಗ್ತಿದಾರೆ. ಒಬ್ಬರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದರು.

ವಿಶ್ವನಾಥ್ ಬಗ್ಗೆ ತಾವು, ಬಿ.ಸಿ.ಪಾಟೀಲ ಸೇರಿ ಸಿಎಂ ಬಳಿ ಮಾತನಾಡಿದ್ದೇವೆ. ಏನೋ ಸಣ್ಣ ಸಮಸ್ಯೆ ಆಗಿದೆ. ಮುಂದಿನ ದಿನಗಳಲ್ಲಿ ಸ್ಥಾನ-ಮಾನ ನೀಡುವುದಾಗಿ ಸ್ವತಃ ಸಿಎಂ ಯೆಡಿಯೂರಪ್ಪ ಅವರು ವಿಶ್ವನಾಥ್ ಅವರಿಗೆ ಹೇಳಿದ್ದಾರೆ. ವಿಶ್ವನಾಥ್ ಸಹ ಸಿಎಂ ಮಾತುಗಳನ್ನು ಸ್ವೀಕರಿಸಿದ್ದಾರೆ. ಸಿಎಂ ಯಡಿಯೂರಪ್ಪ ಈವರೆಗೆ ನುಡಿದಂತೆ ನಡೆದಿದ್ದಾರೆ. ಬೇರೆಯವರಿಗೆ ಮೋಸ, ಅನ್ಯಾಯ ಮಾಡುವ ಜಾಯಮಾನ ಯಡಿಯೂರಪ್ಪ ಅವರದ್ದಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ