Featured
ಅಂಬಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ – ಮೊದಲ ಕಂತಾಗಿ 5 ಕೋಟಿ ಬಿಡುಗಡೆ ಮಾಡಲಿರೋ ಸರ್ಕಾರ

ದಿವಂಗತ ರೆಬೆಲ್ ಸ್ಟಾರ್ ಡಾ. ಅಬರೀಷ್ ನೆನಪು ಅಭಿಮಾನಿಗಳ ಮನದಲ್ಲಿ ಅಜರಾಮರ. ಅಂಬಿ ಸ್ಮಾರಕ ಪ್ರತಿಷ್ಠಾನದ ಬಗ್ಗೆ ಚರ್ಚೆಗಳು ನಡೆಯುತ್ತಲೆ ಇವೆ. ಇನ್ನೂ ಡಾ. ವಿಷ್ಣುವರ್ಧನ್ ಸ್ಮಾರಕ ವಿಚಾರ ಚರ್ಚೆಯಲ್ಲೇ ಇದೆ. ಈ ಮೊದಲು ಡಾ. ರಾಜ್ ಕುಮಾರ್ ಸ್ಮಾರಕದ ಮಾದರಿಯಲ್ಲೇ ವಿಷ್ಣುವರ್ಧನ್ ಮತ್ತು ಅಂಬರೀಷ್ ಸ್ಮಾರಕವೂ ನಿರ್ಮಾಣವಾಗಬೇಕು ಅನ್ನೋ ಚರ್ಚೆಗಳು ನಡೆದಿತ್ತು.
ಈ ಸಂಬಂಧ ದಿವಂಗತ ಅಂಬರೀಷ್ ಪತ್ನಿ ಹಾಗೂ ಸಂಸದೆ ಸುಮಲತಾ, ಅಂಬಿ ಪುತ್ರ ಅಭಿಷೇಕ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಷ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಕೆಲವರ ತಂಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಮಾರಕ ನಿರ್ಮಾಣದ ಕುರಿತು ಸಾಕಷ್ಟು ಚರ್ಚೆ ನಡೆಯಿತು.
ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಸ್ಮಾರಕಕ್ಕೆ ಈ ವರ್ಷ ಮೊದಲ ಕಂತಾಗಿ ಐದು ಕೋಟಿ ರೂಪಾಯಿ ಕೊಡುವುದಾಗಿ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?