Featured
ಕೊರೊನಾ ವಿರುದ್ಧ ಹೋರಾಟ- ಸಂಡೇ ಲಾಕ್ಡೌನ್ಗೆ ಸ್ತಬ್ಧ
ರೈಸಿಂಗ್ ಕನ್ನಡ:
ಹರೀಶ್, ರಾಮನಗರ:
ರಾಮನಗರದಲ್ಲಿ ಕೊರೊನಾ ವಿರುದ್ಧದ ಹೋರಾಟಕ್ಕೆ ಜನರು ಕೈ ಜೋಡಿಸಿದ್ದಾರೆ. ಸರಕಾರ ಸಂಡೇ ಮನೆಯಲ್ಲೇ ಇರುವಂತೆ ಕರೆ ನೀಡಿರುವ ಲಾಕ್ ಡೌನ್ಗೆ ರೇಷ್ಮೆ ನಗರಿ ರಾಮನಗರ ಜಿಲ್ಲೆ ಸಂಪೂರ್ಣ ಸ್ಥಬ್ದಗೊಂಡಿದೆ. ಅಗತ್ಯ ಸೇವೆಗಳ ಓಡಾಟ ಹೊರತು ಯಾವುದೇ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.
ವಾಹನಗಳ ಓಡಾಟವಿಲ್ಲದೇ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಖಾಲಿ ಖಾಲಿಯಾಗಿದೆ. ಪೊಲೀಸರು ಅನಗತ್ಯವಾಗಿ ಸಂಚಾರ ಮಾಡುವವರಿಗೆ ಬುದ್ಧಿಮಾತು ಹೇಳಿ ವಾಪಾಸ್ ಕಳುಹಿಸುತ್ತಿದ್ದಾರೆ. ಪ್ರತಿ ಭಾನುವಾರ ಸಾವಿರಾರು ವಾಹನಗಳು ಮೈಸೂರು ಕಡೆಗೆ ಸಂಚಾರ ಮಾಡುತ್ತಿದ್ದವು. ಆದರೆ ಸಂಡೇ ಲಾಕ್ ಡೌನ್ ಹಿನ್ನೆಲೆ ಯಾವುದೇ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅಗತ್ಯ ವಸ್ತುಗಳನ್ನ ಹೊರತಾಗಿ ಎಲ್ಲಾ ಅಂಗಡಿಮುಂಗಟ್ಟುಗಳು ಬಂದ್ ಮಾಡಲಾಗಿದೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿಯಲ್ಲಿ ಸಂಡೇ ಲಾಕ್ ಡೌನ್ ಗೆ ಸಂಪೂರ್ಣ ಬೆಂಬಲ ಸಿಕ್ಕಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?