Connect with us

Featured

ನ್ಯಾಯಾಂಗ ನಿಂದನೆ ಕೇಸ್- ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಪ್ಪಿತಸ್ಥ- ಸುಪ್ರೀಂ ಕೋರ್ಟ್ ತೀರ್ಪು

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Advertisement

ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​​ ಭೂಷಣ್​​  ನ್ಯಾಯಾಂಗ ವ್ಯವಸ್ಥೆ ವಿರುದ್ಧ ಮಾಡಿದ 2 ಟ್ವೀಟ್​ಗಳು ಅವರಿಗೆ ಮುಳುವಾಗಿದೆ. ಸುಪ್ರೀಂ ಕೋರ್ಟ್​ ಮುಖ್ಯನ್ಯಾಯಮೂರ್ತಿ ಮತ್ತು ಅವರ ಹಿಂದಿನ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಮಾಡಿರುವ ಟ್ವೀಟ್​​ ನ್ಯಾಯಾಂಗ ನಿಂದನೆ ಆಗಿದೆ ಎಂದು ಸುಪ್ರೀಂ ಕೋರ್ಟ್​ ತೀರ್ಪು ನೀಡಿ ಪ್ರಶಾಂತ್​​ ಭೂಷಣ್​ ತಪ್ಪಿತಸ್ಥ ಎಂದಿದೆ.

ಪ್ರಶಾಂತ್​ ಭೂಷಣ್​​​​ಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಆಗಸ್ಟ್​20ರಂದು ಪ್ರಕಟಿಸಲಿದೆ.  ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಕ್ರಿಮಿನಲ್ ಕಾನೂನು ನಿಂದನೆಯಡಿ ಪ್ರಶಾಂತ್ ಭೂಷಣ್ ಗೆ 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ದಂಡ ಅಥವಾ ಜೈಲುವಾಸ ಮತ್ತು ದಂಡ ಎರಡನ್ನೂ ವಿಧಿಸಬಹುದು.

Advertisement

ಹಿನ್ನಲೆ ಏನು..?

ಪ್ರಶಾಂತ್ ಭೂಷಣ್ ಕಳೆದ ಜೂನ್ 27ರಂದು ಸುಪ್ರೀಂ ಕೋರ್ಟ್ ಬಗ್ಗೆ ಮತ್ತು ಜೂನ್ 29ರಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಬಗ್ಗೆ ಟ್ವೀಟ್ ಮಾಡಿದ್ದರು. ಅದು ವೈರಲ್ ಆಗಿ ನ್ಯಾಯಾಂಗ ನಿಂದನೆಯಾಗಿದೆ ಎಂದು ವ್ಯಾಪಕ ಟೀಕೆ ಬಂದ ನಂತರ ಎರಡೂ ಟ್ವೀಟ್ ಗಳನ್ನು ಟ್ವಿಟ್ಟರ್ ತೆಗೆದುಹಾಕಿತ್ತು. ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಗೆ ನ್ಯಾಯಾಂಗ ನಿಂದನೆ ಶೋಕಾಸ್ ನೊಟೀಸ್ ನೀಡಿತ್ತು.

ಮೊದಲ ಟ್ವೀಟ್ ನಲ್ಲಿ, ತುರ್ತು ಪರಿಸ್ಥಿತಿ ಹೇರದೆ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ನಾಶ ಮಾಡಲಾಗಿದೆ ಎಂದು ಕಳೆದ ಆರು ವರ್ಷಗಳನ್ನು ಇತಿಹಾಸಕಾರರು ಹಿಂತಿರುಗಿ ನೋಡಿದರೆ, ನಾಶದಲ್ಲಿ ಸುಪ್ರೀಂ ಕೋರ್ಟ್ ನ ಪಾತ್ರವನ್ನು ಸ್ಪಷ್ಟವಾಗಿ ನೋಡಬಹುದು. ಅದರಲ್ಲೂ ಕಳೆದ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಪಾತ್ರ ಇದರಲ್ಲಿ ಅತ್ಯಂತ ದೊಡ್ಡದಾಗಿದೆ ಎಂದು ಮಾಜಿ ಮುಖ್ಯ ನ್ಯಾಯಮೂರ್ತಿಗಳನ್ನು ಪ್ರಶಾಂತ್ ಭೂಷಣ್ ಆರೋಪಿಸಿದ್ದರು.

Advertisement

ಮತ್ತೊಂದು ಟ್ವೀಟ್ ನಲ್ಲಿ, ನಾಗ್ಪುರದಲ್ಲಿ ರಾಜಭವನದಲ್ಲಿ ಬಿಜೆಪಿ ನಾಯಕನಿಗೆ ಸೇರಿದ 50 ಲಕ್ಷದ ಬೈಕ್ ನಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದ್ದಾರೆ. ದೇಶದ ನಾಗರಿಕರ ಮೂಲಭೂತ ಹಕ್ಕಾದ ನ್ಯಾಯ ಸಿಗುವುದಕ್ಕೆ ಕೊರೋನಾ ಲಾಕ್ ಡೌನ್ ಎಂದು ಹೇಳಿಕೊಂಡು ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಕ್ಕೆ ರಜೆ ಹಾಕಿ ಮುಖ್ಯ ನ್ಯಾಯಮೂರ್ತಿಗಳು ಬೈಕ್ ನಲ್ಲಿ ಜಾಲಿ ರೈಡ್ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು.

ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ಟಿನಲ್ಲಿ ನ್ಯಾಯವಾದಿ ಪ್ರಶಾಂತ್ ಭೂಷಣ್, ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಿಂದನಕಾರಿಯಾಗಿ ಹೇಳಿಕೆ ನೀಡಿದ್ದು ತಪ್ಪು. ಅವರು ಬೈಕ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ. ನಿಂತಿದ್ದ ಬೈಕ್ ಮೇಲೆ ಹೆಲ್ಮೆಟ್ ಧರಿಸದೆ ಕುಳಿತಿದ್ದರು, ಅದನ್ನು ನಾನು ಗಮನಿಸುವಲ್ಲಿ ವಿಫಲನಾಗಿದ್ದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ಭ್ರಷ್ಟರಾಗಿದ್ದರು ಎಂದು 2009ರಲ್ಲಿ ತೆಹಲ್ಕಾ ಮ್ಯಾಗಜಿನ್ ಗೆ ನೀಡಿದ್ದ ಸಂದರ್ಶನದಲ್ಲಿ ಪ್ರಶಾಂತ್ ಭೂಷಣ್ ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ ಕೂಡ ಸುಪ್ರೀಂ ಕೋರ್ಟ್ ಅವರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿತ್ತು.

ಟ್ವೀಟ್ ಗಳ ಬಗ್ಗೆ ಪ್ರಶಾಂತ್ ಭೂಷಣ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕಳೆದ ಜುಲೈ 22ರಂದು ತಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಏಕೆ ನಡೆಸಬಾರದು ಎಂದು ಕೇಳಿ ಶೋಕಾಸ್ ನೊಟೀಸ್ ನೀಡಿತ್ತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ