Featured
ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ – ದೈವಾದೀನರಾದ ಹೊನ್ನಾಳಿ ರಾಂಪುರ ಹಾಲುಸ್ವಾಮಿ ಮಠದ ಶ್ರೀಗಳು
![](https://risingkannada.com/wp-content/uploads/2020/07/death-swamiji1594817482.jpg)
ರೈಸಿಂಗ್ ಕನ್ನಡ :
ಶಿವಮೊಗ್ಗ :
ಹೊನ್ನಾಳಿ ತಾಲೂಕು ರಾಂಪುರ ಹಾಲಸ್ವಾಮಿ ಮಠದ ಶ್ರೀ ಹಾಲಶಂಕರ ವಿಶ್ವಾರಾದ್ಯ ಸ್ವಾಮಿಗಳು ಕೊರೊನಾ ಸೋಂಕಿನಿಂದ ದೈವಾದೀನರಾಗಿದ್ದಾರೆ. ಮೂರು ದಿನಗಳ ಹಿಂದೆ ಅವರನ್ನ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ, ಶ್ರೀಗಳು ಬುಧವಾರ ಕೊನೆಯುಸಿರೆಳೆದಿದ್ದಾರೆ.
ಮುಳ್ಳುಗದ್ದುಗೆ ಸ್ವಾಮೀಜಿ ಎಂದೇ ಹೆಸರಾಗಿದ್ದ ಅವರು, ವೀರಶೈವ ಪರಂಪರೆಯ ಪ್ರಮುಖ ಶ್ರೀಗಳಾಗಿದ್ದರು. ಕೆಲ ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು ಎಂದು ತಿಳಿದುಬಂದಿದೆ. ಭಕ್ತರು ಎಷ್ಟೇ ವಿನಂತಿಮಾಡಿಕೊಂಡಿದ್ದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಎರಡು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ದೈವಾದೀನರಾಗಿದ್ದಾರೆ.
ಶ್ರೀಗಳು ಹೊನ್ನಾಳಿ ತಾಲೂಕಿನ ರಾಂಪುರ ಮಠ ಹಾಗೂ ಚನ್ನಗಿರಿ ತಾಲೂಕಿನ ಬಸವಾಪಟ್ಟದಣ ಗವಿಮಠದ ಪೀಠಾಧ್ಯಕ್ಷರು ಆಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?