Featured
ಕೊರೊನಾ ಹಿನ್ನೆಲೆ: ವಿದ್ಯಾಗಮ ಕಾರ್ಯಕ್ರಮಕ್ಕೆ ತಾತ್ಕಲಿಕ ಬ್ರೇಕ್: ಸಚಿವ ಸುರೇಶ್ ಕುಮಾರ್
ರೈಸಿಂಗ್ ಕನ್ನಡ :
ಬೆಂಗಳೂರು:
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನ ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ.
ಕೊರೊನಾ ಹಿನ್ನಲೆಯಲ್ಲಿ ಶಾಲೆಗಳು ಇನ್ನೂ ತೆರೆದಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಆನ್ಲೈನ್ ತರಗತಿ ಕೊಡಲು ಸಾಧ್ಯವಿರದ ಕಾರಣಕ್ಕಾಗಿ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ವಿದ್ಯಾಗಮ ಕಾರ್ಯಕ್ರಮ ಆರಂಭವಾದ ನಂತರ ದಾವಣಗೆರೆಯಲ್ಲಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಕರ ಜೀವಕ್ಕೆ ಅಪಾಯವಿದೆ ಮತ್ತು ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನ ತಾತ್ಕಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಮತ್ತು ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೆ ವಿದ್ಯಾಗಮ ಕಾರ್ಯಕ್ರಮವನ್ನ ಮತ್ತೆ ಆರಂಭಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿರುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?