Connect with us

ರಾಜಕೀಯ

ಶೋಕ ಸಾಗರದಲ್ಲಿ ನಡೆಯಿತು ಸುರಪುರದ ಶಾಸಕರ ಅಂತ್ಯಕ್ರಿಯೆ

ಯಾದಗಿರಿ: ಸರಳ, ಸಜ್ಜನ, ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಾಲ್ಕನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಕಾಲಿಟ್ಟಿದ್ದರು. ಅವರ ಹಿರಿತನಕ್ಕೆ ಇತ್ತಿಚಿಗಷ್ಟೇ ಉಗ್ರಾಣ ನಿಗಮ ಮಂಡಳಿ ಅಧ್ಯಕ್ಷ ಗಾದಿಯೂ ಒಲಿದು ಬಂದಿತ್ತು. ಅವರು ಅಧಿಕಾರ ವಹಿಸಿಕೊಂಡು 21 ದಿನಗಳೂ ಕಳೆದಿಲ್ಲ. ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಅವ್ರ ಅಕಾಲಿಕ ನಿಧನದಿಂದ ರಾಜಕೀಯ ವಲಯ ಸೇರಿದಂತೆ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಕ್ಷೇತ್ರದಾದ್ಯಂತ ಜನರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರ ಸಾವನ್ನಪ್ಪಿರುವ ಸುದ್ದಿ ಬರ ಸಿಡಿಲಿನಂತೆ ಬರುತ್ತಿದ್ದಂತೆಯೇ ಸುರಪುರ ಪಟ್ಟಣದಲ್ಲಿ ನೀರವ ಮೌನ ಆವರಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ, ಮುಗ್ಗಟ್ಟುಗಳನ್ನು ಮುಚ್ಚಿ ನೆಚ್ಚಿನ ನಾಯಕನ ಅಗಲಿಕೆಗೆ ಕಂಬನಿ ಮಿಡಿಯಿತು.

ಇನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಮೂಲತಃ ರಾಜ ಮನೆತನದವರಾಗಿದ್ರು. ಅವ್ರ ತಂದೆ ಬಳುವಳಿಯಿಂದ ರಾಜಕೀಯಕ್ಕೆ ಬಂದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಅತ್ಯಾಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಖರ್ಗೆ ಅವ್ರ ಮಾರ್ಗದರ್ಶನದಲ್ಲಿ ಬೆಳೆದು, ಖರ್ಗೆ ಅವರಂತೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿಯೇ ಕೊನೆವರೆಗೆ ಉಳಿದ್ರು. ಇನ್ನು ರಾಜಾ ವೆಂಕಟಪ್ಪ ನಾಯಕ ನೇರ ನುಡಿಗೆ ಹೆಸರುವಾಸಿಯಾಗಿದ್ರು.

ಸುರಪುರ ನಗರದ ಪ್ರಭು ಕಾಲೇಜು ಆವರಣದಲ್ಲಿ ಶಾಸಕ ವೆಂಕಟಪ್ಪ ನಾಯಕರ ಅಂತಿಮ ದರ್ಶನಕ್ಕೆ‌ ಜಿಲ್ಲಾಡಳಿತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಘಂಟೆವರೆಗೆ ಸಾರ್ವಜನಿಕರ ಅಂತಿಮ ದರ್ಶನ ನಡೆಯಿತು. ಅಂತಿಮ ದರ್ಶನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಬಿ. ನಾಗೇಂದ್ರ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಸಂಸದ ರಾಜಾ ಅಮರೇಶ್ವರ ನಾಯಕ, ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ, ಮಾಜಿ ಶಾಸಕ ಕೆ. ಶಿವನಗೌಡ ನಾಯಕ ಸೇರಿದಂತೆ ಹಲವಾರು ಶಾಸಕರು, ಗಣ್ಯ ಮಾನ್ಯರು ಭಾಗವಹಿಸಿ ಪಾರ್ಥಿವ ಶರೀರಕ್ಕೆ‌ ಅಂತಿಮ ಗೌರವ ಸಲ್ಲಿಸಲಿದರು.

ಪ್ರಭು ಕಾಲೇಜ್ ಆವರಣದಲ್ಲಿ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಅಂತಿಮವಾಗಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಪೊಲೀಸ್ ಇಲಾಖೆಯಿಂದ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಕೆ ಮಾಡಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ