ದೇಶ-ವಿದೇಶ
ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ : 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ..?
Gold : ಅಮೆರಿಕದ ಕೇಂದ್ರಿಯ ಬ್ಯಾಂಕ್ ಬಡ್ಡಿ ದರ ಕಡಿತ ಮಾಡುವ ಸೂಚನೆ ಸಿಕ್ಕಿದ್ದೇ ತಡ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದೆ. 10 ಗ್ರಾಂ ಚಿನ್ನದ ಬೆಲೆ 65,150 ರೂಪಾಯಿ ಆಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಭಾರತೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಒಂದೇ ದಿನ ಸುಮಾರು 800 ರೂಪಾಯಿಯಷ್ಟು ಏರಿಕೆ ಕಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಆಗುತ್ತಿರುವ ಏರಿಳಿತಗಳಿಂದ ಅಮೆರಿಕದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಹೀಗಾಗಿ ಜೂನ್ ನಲ್ಲಿ ಅಮೆರಿಕ ಕೇಂದ್ರೀಯ ಬ್ಯಾಂಕ್ ಬಡ್ಡಿ ದರ ಕಡಿತ ಮಾಡುವ ಸೂಚನೆ ಸಿಕ್ಕಿದೆ. ಮಧ್ಯ ಪ್ರಾಚ್ಯ ದೇಶಗಳಾದ ಇಸ್ರೇಲ್-ಹಮಾಸ್-ಲೆಬನಾನ್ ನಡುವಿನ ಸಂಘರ್ಷ, ಚೀನಾದಲ್ಲಿ ಉಂಟಾಗಿರುವ ರಿಯಲ್ ಎಸ್ಟೇಟ್ ವಲಯದ ಕುಸಿತ, ಬಾಂಡ್ ಗಳ ಹೂಡಿಕೆಯಲ್ಲಿ ಇಳಿಕೆಯಿಂದಾಗಿ ಡಾಲರ್ ದುರ್ಬಲವಾಗಿರುವುದು ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡು ಬರಲಿದ್ದು, ಜೂನ್ ಅಥವಾ ಜುಲೈ ಬಳಿಕ 10 ಗ್ರಾಂ ಚಿನ್ನದ ಬೆಲೆ 65 ಸಾವಿರ ರೂಪಾಯಿ ಆಸುಪಾಸಿಗೆ ಬರಲಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?