Connect with us

ರಾಜ್ಯ

ಕೇರಳ ಕರ್ನಾಟಕ ರೈಲ್ವೆ ಸಂಪರ್ಕ ಯೋಜನೆ ಸಮೀಕ್ಷೆ ಬೆನ್ನಲ್ಲೇ ಗಡಿಜಿಲ್ಲೆಯಲ್ಲಿ #save bandipura ಅಭಿಯಾನ ಟ್ರೆಂಡ್ ಆಗುತ್ತಿದೆ.

ಬಂಡೀಪುರ : ಗಡಿಜಿಲ್ಲೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ಭಾರತದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಹುಲಿ ಸಂರಕ್ಷಿತ ಪ್ರದೇಶವಾಗಿದೆ. ಬಂಡೀಪುರ ಅಭಯಾರಣ್ಯ ಕೇರಳ ಹಾಗು ತಮಿಳುನಾಡು ಗಡಿಯನ್ನು ಹಂಚಿಕೊಂಡಿದ್ದು, ಹುಲಿ, ಚಿರತೆ, ಆನೆ, ಕಾಡೆಮ್ಮೆ, ಸೀಳುನಾಯಿ, ಜಿಂಕೆ, ಕಡವೆ ಸೇರಿದಂತೆ ಹಲವಾರು ಪ್ರಬೇಧಗಳ ಪ್ರಾಣಿ ಪಕ್ಷಿ ಸಂಕುಲಗಳು ಹೆಚ್ಚಾಗಿ ವಾಸಿಸುತ್ತವೆ. ಹೀಗಾಗಿ ಬಂಡೀಪುರದ ದಟ್ಟ ಕಾನನದ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವಾರು ಪ್ರಾಣಿಗಳು ಅಪಘಾತದಲ್ಲಿ ಸಾವನ್ನಪ್ಪುತ್ತಿರುವುದನ್ನು ತಡೆಗಟ್ಟಲು ನಡೆಸಿದ ಪರಿಸರ ವಾದಿಗಳ ಹೋರಾಟಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ಸಿಕ್ಕಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಈಗಾಗಲೇ ಬಂಡೀಪುರದ ಅರಣ್ಯ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಲಾಗಿದೆ..

ಆದರೆ ಇತ್ತೀಚೆಗೆ ಕೇರಳ ಸರ್ಕಾರ ಬಂಡೀಪುರ- ವಯನಾಡು ವ್ಯಾಪ್ತಿಯಲ್ಲಿ ಬರುವ ನೀಲಂಬೂರು- ನಂಜನಗೂಡು ರೈಲ್ವೆ ಮಾರ್ಗಕ್ಕೆ ವೈಮಾನಿಕ ಸಮೀಕ್ಷೆ ನಡೆಸಲಾಗಿದ್ದು, ಅಭಯಾರಣ್ಯದ ನಡುವೆ ಹಾದು ಹೋಗಲಿರುವ ರೈಲ್ವೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ #save bandipura ಅಭಿಯಾನ ಟ್ರೆಂಡ್ ಆಗುತ್ತಿದೆ.

ಇನ್ನೂ ಪರಿಸರಕ್ಕೆ ಮಾರಕವಾದ ನೀಲಂಬೂರು- ನಂಜನಗೂಡು ರೈಲ್ವೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೈಸೂರಿನ ಗಂಧದಗುಡಿ ಫೌಂಡೇಶನ್ ಹಾಗು ಮೈಸೂರು ಮೀಮ್ಸ್ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆಯ ಮೂಲಕ ಹೋರಾಟ ಮುಂದುವರೆಸಿದ್ದು, ಯಾವುದೇ ಕಾರಣಕ್ಕೂ ಬಂಡೀಪುರ ಅಭಯಾರಣ್ಯಕ್ಕೆ ಅಪಾಯ ಬಾರದಂತೆ ತಡೆಗಟ್ಟಲು ಎಲ್ಲರೂ ಕೈಜೋಡಿಸುವಂತೆ ಕರೆ ಕೊಟ್ಟಿದ್ದಾರೆ.

ಈ ನಡುವೆ ಇತ್ತೀಚಿಗೆ ಬಂಡೀಪುರಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅಗತ್ಯ ಸಂದರ್ಭಗಳಲ್ಲಿ ಬಂಡೀಪುರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ರಾತ್ರಿ ಸಂಚಾರ ನಿರ್ಬಂಧ ಸಡಿಲಿಸಲು ಚಿಂತನೆ ನಡೆಸಲಾಗಿದೆ ಎಂಬ ಹೇಳಿಕೆ ಪರಿಸರ ವಾದಿಗಳನ್ನು ಮತ್ತಷ್ಟು ಕೆರಳುವಂತೆ ಮಾಡಿದ್ದು, ಒಂದು ವೇಳೆ ರಾತ್ರಿ ಸಂಚಾರ ನಿಷೇಧ ಸಡಿಲಿಸಿದರೆ ಕಾಡು ಪ್ರಾಣಿಗಳಿಗೆ ತೊಂದರೆ ಹೆಚ್ಚಾಗಿ ಅವುಗಳು ನಾಡಿಗೆ ದಾಳಿ ಇಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಮಾನವ ಸಂಘರ್ಷಕ್ಕೆ ಸರ್ಕಾರವೇ ದಾರಿ ಮಾಡಿಕೊಟ್ಟಂತೆ ಆಗುತ್ತದೆ, ಹೀಗಾಗಿ ಯಾವುದೇ ಕಾರಣಕ್ಕೂ ಸಂರಕ್ಷಿತ ಹುಲಿ ಯೋಜನೆ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧ ಸಡಿಲಿಸಬಾರದು ಮತ್ತು ಪರಿಸರಕ್ಕೆ ಮಾರಕವಾಗುವ ರೈಲ್ವೆ ಯೋಜನೆಗೆ ಅವಕಾಶ ಕೊಡಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಒಟ್ಟಾರೆ ಅಭಿವೃದ್ಧಿ ಯೋಜನೆಯ ಹೆಸರಿನಲ್ಲಿ ಅರಣ್ಯ ಪ್ರದೇಶಗಳನ್ನು ಬಳಸಿಕೊಳ್ಳುವ ಮೂಲಕ ವನ್ಯ ಜೀವಿಗಳ ಆವಾಸಸ್ಥಾನಕ್ಕೆ ಲಗ್ಗೆ ಇಡುತ್ತಿರುವುದರಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖ ಮಾಡುತ್ತಿವೆ, ಸರ್ಕಾರ ಈಗಲಾದರೂ ಎಚ್ಚತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕಾಡು ನಾಶವಾದರೆ ವನ್ಯ ಜೀವಿ ಸಂಕುಲ ನಾಡನ್ನು ಆಕ್ರಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ