Featured
ಬೆಂಗಳೂರಿನಲ್ಲಿ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆ: ಆರೋಗ್ಯ ಇಲಾಖೆಯಿಂದ ಆತಂಕಕಾರಿ ಮಾಹಿತಿ
ರೈಸಿಂಗ್ ಕನ್ನಡ :
ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾಗಿದೆ ಇದರ ನಡುವೆ ಸುಮಾರು 3 ಸಾವಿರಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ನಾಪತ್ತೆಯಾಗಿದ್ದಾರೆ ಎನ್ನುವ ಆತಂಕಕಾರಿ ಮಾಹಿತಿಯನ್ನ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.
ಬಿಬಿಎಂಪಿ ಕಮೀಷನರ್ ಎನ್. ಮಂಜುನಾಥ್ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸುಮಾರು 3,338 ಜನರಿಗೆ ಲ್ಯಾಬ್ನಲ್ಲಿ ಪರೀಕ್ಷಿಸಲಾದ ಸ್ಯಾಂಪಲ್ಗಳು ಪಾಸಿಟಿವ್ ಬಂದಿದೆ. ಇದರಲ್ಲಿ ಕೆಲವರು ತಪ್ಪು ಮೊಬೈಲ್ ಸಂಖ್ಯೆ ಮತ್ತು ಮನೆ ವಿಳಾಸವನ್ನ ಕೊಟ್ಟಿದ್ದಾರೆ.
ಪಾಸಿಟಿವ್ ಎಂದು ದೃಢಪಟ್ಟವರ ಸುಳಿವು ನಮಗೆ ಸಿಗುತ್ತಿಲ್ಲ. ಈ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ 14 ದಿನಗಳಲ್ಲಿ 27 ಸಾವಿರ ಕೊರೊನಾ ಸೋಂಕು ತಗುಲಿರುವ ವರದಿಯಾಗಿವೆ.
ಬೆಂಗಳೂರು ಕೋವಿಡ್ 19 ಹಾಟ್ಸ್ಪಾಟ್
ಕರ್ನಾಟಕದಲ್ಲಿ ಕೊರೊನಾ ಶೇಕಡ 58 ರಷ್ಟು ಸಕ್ರಿಯವಾಗಿದೆ. ಬರೀ ಬೆಂಗಳೂರಿನಲ್ಲಿ ಪ್ರತಿ ದಿನ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು ನಗರದಲ್ಲಿ ಸೋಂಕಿತರ ಸಂಖ್ಯೆ 43,503ಕ್ಕೆ ಏರಿದೆ.
ಮನೆಯಲ್ಲೆ ಇರಿ ಮತ್ತು ಲಾಕ್ಡೌನ್ ಸಂದರ್ಭದಲ್ಲಿ ಸುರಿಕ್ಷಿತರಾಗಿರಿ. ಕೊರೊನಾ ಸರಪಳಿಯನ್ನ ಮುರಿಯುವುದು ನಿಮ್ಮಆಸಕ್ತಿ ಮೇಲೆ ನಿಂತಿದೆ. ನಿಮ್ಮ ಸುರಕ್ಷತೆಗಾಗಿ ನಾವು ಬೀದಿಯಲ್ಲಿ ನಿಂತು ರಕ್ಷಣೆ ಮಾಡುತ್ತಿದ್ದೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?