Connect with us

ರಾಜಕೀಯ

ಕನ್ನಡ ಸಿನಿಮಾ ನಟಿಗೆ ಪಶ್ಚಿಮ ಬಂಗಾಳದಲ್ಲಿ ಟಿಕೆಟ್!

ಸಿನಿಮಾ : ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಹಿನ್ನೆಲೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.. ಇದರಲ್ಲಿ ಹೂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡೋಕೆ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ ನಟಿಗೆ ಟಿಕೆಟ್ ನೀಡಲಾಗಿದೆ.

ಟಿಎಂಸಿ ಘೋಷಿಸಿದ ಪಟ್ಟಿಯಲ್ಲಿ ರಚನಾ ಬ್ಯಾನರ್ಜಿಗೂ ಟಿಕೆಟ್ ಘೋಷಿಸಲಾಗಿದೆ. ಇವರು ನಮ್ಮ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ.
ನಟಿ, ಉದ್ಯಮಿ, ದೂರದರ್ಶನ ನಿರೂಪಕಿ, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಟಿಸಿರುವ ರಚನಾ ಬ್ಯಾನರ್ಜಿಗೆ ತೃಣಮೂಲ ಕಾಂಗ್ರೆಸ್, ಹೂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ. ಇವರ ಜೊತೆಗೆ ಸಿನಿಮಾ ನಟ ಶತ್ರುಘ್ನ ಸಿನ್ಹಾ, ಕ್ರಿಕೆಟರ್ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದಿಗೂ ಟಿಎಂಸಿ ಟಿಕೆಟ್ ನೀಡಿದೆ.

ಟಿಎಂಸಿ ಟಿಕೆಟ್ ಪಡೆದಿರುವ ರಚನಾ ಬ್ಯಾನರ್ಜಿ, ಮೇ 2000ರಲ್ಲಿ ಬಿಡುಗಡೆಯಾದ ’ಪ್ರೀತ್ಸು ತಪ್ಪೇನಿಲ್ಲ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ವಿ.ಎಸ್ ರೆಡ್ಡಿ ನಿರ್ದೇಶಿಸಿದ ಮತ್ತು ಜಿವಿಜಿ ರಾಜು ನಿರ್ಮಿಸಿದ ಈ ಚಿತ್ರದಲ್ಲಿ ರವಿಚಂದ್ರನ್, ರಚನಾ ಬ್ಯಾನರ್ಜಿ, ಸುಮನ್ ನಗರ್ಕರ್, ಶ್ರೀನಿವಾಸಮೂರ್ತಿ ಮುಂತಾದವರು ಪ್ರಮುಖ ತಾರಾಗಣದಲ್ಲಿದ್ದರು.

ಇದಾದ ನಂತರ, ಏಪ್ರಿಲ್ 2001ರಲ್ಲಿ ಬಿಡುಗಡೆಯಾದ ’ಉಸಿರೆ’ ಎನ್ನುವ ಚಿತ್ರದಲ್ಲೂ ರಚನಾ ಬ್ಯಾನರ್ಜಿ ನಾಯಕಿಯಾಗಿ ನಟಿಸಿದ್ದರು. ಪ್ರಭು ಸೊಲೊಮನ್ ನಿರ್ದೇಶಿಸಿದ್ದ ಈ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ರವಿಚಂದ್ರನ್, ರಚನಾ, ಪ್ರಕಾಶ್ ರಾಜ್, ಸಾಧು ಕೋಕಿಲಾ, ದೊಡ್ಡಣ್ಣ ಮುಂತಾದವರಿದ್ದರು.

ಕೋಲ್ಕತ್ತಾದಲ್ಲಿ ಜನಿಸಿದ ರಚನಾ ಬ್ಯಾನರ್ಜಿಗೆ ಹೂಗ್ಲಿ ಕ್ಷೇತ್ರದ ಟಿಕೆಟ್ ಅನ್ನು ನೀಡಲಾಗಿದೆ. 2009 ಮತ್ತು 2014ರಲ್ಲಿ ಈ ಕ್ಷೇತ್ರದಲ್ಲಿ ಟಿಎಂಸಿಯ ರತನ್ ದೇ ಗೆದ್ದಿದ್ದರೆ, 2019ರ ಚುನಾವಣೆಯಲ್ಲಿ ಬಿಜೆಪಿಯ ಲಾಕೆಟ್ ಚಟರ್ಜಿ ಗೆಲುವು ಸಾಧಿಸಿದ್ದರು. ಈ ಬಾರಿ, ಬಿಜೆಪಿ ಲಾಕೆಟ್ ಚಟರ್ಜಿಗೆ ಟಿಕೆಟ್ ಅನ್ನು ನೀಡಿದೆ. ರಚನಾ ಅವರು ಈ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರಾ ಎಂದು ಕಾದು ನೋಡಬೇಕಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ