Connect with us

ರಾಜಕೀಯ

ನಾಳೆ, ನಾಡಿದ್ದು ಉಳಿದ ಅಭ್ಯರ್ಥಿಗಳ ಟಿಕೆಟ್ ಘೋಷಣೆ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ. ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌.
ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಚೆನ್ನಯ್ಯ ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನುವುದು ಊಹಾಪೋಹಾ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗತ್ತದೆ‌ ಏನು ಆಗುವುದಿಲ್ಲ. ಹಾವೇರಿ ಸಂಸದ ಶಿವಕುಮಾರ ಉದಾಸಿ ಕೂಡ ನಮ್ಮ‌ ಜೊತೆಗೆ ಬರುತ್ತಾರೆ ಎಂದರು.
ನಾನು ಕಳೆದ 34 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ನನಗೆ ದೊಡ್ಡ ಪ್ರಮಾಣದ ಬೆಂಬಲಿಗರಿದ್ದಾರೆ. ನಾನು ಎರಡು ಬಾರಿ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರಾಗಿ ಆಯ್ಕೆ ಜನರ ಜೊತೆಗಿದ್ದು ಕೆಲಸ ಮಾಡಿರುವುದರಿಂದ ಸಾಕಷ್ಟು ಜನ ಬೆಂಬಲಿಗರಿದ್ದಾರೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿರುವ ಪೋಕ್ಸೊ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗೃಹ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅದನ್ನು ಜವಾಬ್ದಾರಿಯಿಂದ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

Advertisement

ದೂರು ಕೊಟ್ಟವರು ಈ ಹಿಂದೆ ಬೇರೆಯವರ ಮೇಲೆ‌ ದೂರು ಕೊಟ್ಟಿದ್ದು, ಮಾನಸಿಕ ಅಸ್ವಸ್ಥತೆ ಕುರಿತು ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣದಲ್ಲಿ ಯಡಿಯೂರಪ್ಪ ಅವರ ಹೆಸರಿಗೆ ಕಳಂಕ ತರುವಪ್ರಯತ್ನ ಮಾಡುತ್ತಾರೆ. ಇದರಲ್ಲಿ ಯಾವುದೇ ಸದುದ್ದೇಶ ಇಲ್ಲ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ ಎನ್ನುವ ನಂಬಿಕೆ ಇದೆ. ಚುನಾವಣೆ ಸಂದರ್ಭದಲ್ಲಿ ಇಂಥ ಘಟನೆಗಳು ನಡೆಯುತ್ತವೆ. ಸತ್ಯಕ್ಕೆ ಯಾವತ್ತೂ ಜಯವಾಗುತ್ತದೆ ಎಂದು ಹೇಳಿದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ