ಟಾಪ್ ನ್ಯೂಸ್
ಸಾರಿಗೆ ನೌಕರರ ಸಮರ ಶುರು: ಬಸ್ ಸಂಚಾರ ಸ್ತಭ್ಧವಾಗುತ್ತಾ?
![](https://risingkannada.com/wp-content/uploads/2024/03/bus-fair.jpg)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ರಾಜ್ಯ ಸರ್ಕಾರದ ವಿರುದ್ದ ಹೋರಾಟಕ್ಕೆ ಧುಮುಕಿದ್ದಾರೆ. ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಮರ ಸಾರಲು ಮುಂದಾಗಿದ್ದು, ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಅನಿರ್ದಿಷ್ಟವಾಧಿ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದು, ಡಿ.2020 ಹಾಗೂ ಏಪ್ರಿಲ್ 2021 ರಲ್ಲಿ ನಡೆದ ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಕೂಡಲೇ ಕರ್ತವ್ಯಕ್ಕೆ ಮರು ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಾರಿಗೆ ನೌಕರರು ಆಗ್ರಹ ಮಾಡಿದ್ದಾರೆ.
ಹಾಗೂ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಇಲ್ಲವಾದ್ರೆ ಮಾರ್ಚ್ 4 ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆಯನ್ನು ಸರ್ಕಾರಕ್ಕೆ ರಾಜ್ಯ ರಸ್ತೆ ಸಾರಿಗೆ ನೌಕರರು ನೀಡಿದ್ದಾರೆ.
![](https://risingkannada.com/wp-content/uploads/2024/03/ksrtc-1024x1024.jpg)
ಸಾರಿಗೆ ನೌಕರರ ಬೇಡಿಕೆಗಳೇನು?
• 2020 ರಿಂದ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಗೆ ಒಂದೇ ಕಂತಿನಲ್ಲಿ ವೇತನ ಹಿಂಬಾಕಿಗೆ ಒತ್ತಾಯ
• ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮತ್ತು ಸವಲತ್ತುಗಳನ್ನ ಸಾರಿಗೆ ನೌಕರರಿಗೆ ವಿಸ್ತರಣೆಗೆ ಒತ್ತಾಯ
• ಡಿ.2020 ಹಾಗೂ ಏಪ್ರಿಲ್ 2021 ರಲ್ಲಿ ನಡೆದ ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರು ನೇಮಕಾತಿ ಮಾಡಿಕೊಳ್ಳುವುದು.
• ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು.
• ನಿಗಮಗಳಲ್ಲಿ ಖಾಸಗೀಕರಣವನ್ನ ನಿಲ್ಲಿಸಬೇಕು.
• ಆರೋಗ್ಯ ಭಾಗ್ಯ ಯೋಜನೆಯನ್ನ ಸಾರಿಗೆ ನೌಕರರಿಗೆ ಜಾರಿ ಮಾಡಬೇಕು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?