ಜ್ಯೋತಿಷ್ಯ
ಮುರುಘಾ ಶ್ರೀಗೆ ಮತ್ತೆ ಸಂಕಷ್ಟ.. ಸುಪ್ರೀಂನಲ್ಲಿ ಹಿನ್ನಡೆ
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಅಂಗಳದಲ್ಲಿ ನಡೆದ ಫೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ.
ಎಸ್ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು.
ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತರ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?