Featured
ಬುಡಗನಳ್ಳಿ ಕೆರೆಯಿಂದ ಅಮಾನಿಕೆರೆಗೆ ನೀರು- ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನಿಂದ ಪ್ರಾಯೋಗಿಕ ಪರೀಕ್ಷೆ
ರೈಸಿಂಗ್ ಕನ್ನಡ:
ಕೆ.ಆರ್.ಬಾಬು, ತುಮಕೂರು:
ತುಮಕೂರು ನಗರದ ಜನಸಂಖ್ಯೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕವಾದ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಯೋಗದೊಂದಿಗೆ ಬುಗುಡನಹಳ್ಳಿ ಕೆರೆಯಿಂದ ಅಮಾನಿಕೆರೆಗೆ ನೀರನ್ನು ತುಂಬಿಸಿದ್ದಾರೆ. ಈ ನೀರು ಪಿ.ಎನ್. ಪಾಳ್ಯದಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ (WTP) ಹಾಯಿಸಿ ಶುದ್ಧೀಕರಣ ನಂತರ ಕುಡಿಯುವ ನೀರಿಗೆ ನೀರು ಸರಬರಾಜು ಮಾಡಲು ಯೋಜನೆಯನ್ನು ತಯಾರಿಸಲಾಗಿದೆ.
ಈ ಯೋಜನೆಯನ್ನು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅನುದಾನದಲ್ಲಿ ಎರಡು ಹಂತದಲ್ಲಿ 32 ಕೋಟಿಗಳಿಗೆ ಟೆಂಡರ್ ಕರೆಯಲಾಗಿದೆ. ಇದರ ಮೊದಲ ಹಂತವಾದ ಬುಗುಡನಹಳ್ಳಿ ಕೆರೆಯಿಂದ ತುಮಕೂರು ಅಮಾನಿಕೆರೆಗೆ ನೀರು ತುಂಬುವ ಕಾಮಗಾರಿಯು ಮುಕ್ತಾಯಗೊಂಡಿದೆ. ಈ ಯೋಜನೆಯಿಂದ ತುಮಕೂರಿನ ನೀರಿನ ಬವಣೆ ನಿಲ್ಲಲಿದೆ ಎಂದು ಹೇಳಲಾಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?