Featured
ಮಂಗಳೂರಿನಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ರೈಸಿಂಗ್ ಕನ್ನಡ :
ಮಂಗಳೂರು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿದೆ. ಮಂಗಳೂರಿನ ಬೆಂಗ್ರೆ ನಿವಾಸಿ 51 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರು ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದರು. ಅವರನ್ನು ಕೊರೋನಾ ಪರೀಕ್ಷಿಸಿದಾಗ ಪಾಸಿಟಿವ್ ಬಂದಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮತ್ತೊಂದೆಡೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 31 ವರ್ಷದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಯುವಕನ ಸಾವಿನ ಬಳಿಕ ಕೊರೊನಾ ಟೆಸ್ಟ್ ಮಾಡಿದ್ದು, ಅದರಲ್ಲಿ ಆತನಿಗೆ ಸೋಂಕು ದೃಢಪಟ್ಟಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?