Connect with us

Featured

ಅರಬ್ಬಿ ಸಮುದ್ರದಲ್ಲಿ ಗಾಳಿ ಅಬ್ಬರ : ಗಾಳಿ ಹೊಡೆತಕ್ಕೆ ದಡ ಸೇರಿದ ಎರಡು ಬೋಟ್

ರೈಸಿಂಗ್​ ಕನ್ನಡ:

ಕಾರವಾರ:

ಕಾರವಾರದ ಟ್ಯಾಗೋರ್ ಕಡಲ ತೀರದಲ್ಲಿ ಗಾಳಿ ಹೊಡೆತಕ್ಕೆ ಎರಡು ಬೋಟುಗಳು ದಡ ಸೇರಿವೆ.

ಕಳೆದ ಕೆಲವು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಗಾಳಿ ಅಬ್ಬರ ಜೋರಾಗಿದ್ದು ಮೀನುಗಾರರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

Advertisement

ಮಲ್ಪೆಯ ಎರಡು ಬೋಟ್​ಗಳು ಭಾನುವಾರ ರಾತ್ರಿ ಸಮಾರು 2.30ರಷ್ಟೊತ್ತಿಗೆ ಕಾರವಾರ ಬಂದರಿಗೆ ಬರಲು ಯತ್ನಿಸಿದ್ದವು. ಆ ವೇಳೆ ಗಾಳಿಗೆ ನಿಯಂತ್ರಣ ತಪ್ಪಿ ಅಲೆಗಳ ರಭಸಕ್ಕೆ ಸಿಲುಕಿ ಕಾರವಾರದ ಬೀಚ್ ನಲ್ಲಿ ಸಿಲುಕಿಕೊಂಡವು.

ಅದೃಷ್ಟವಶಾತ್ ಬೋಟ್ ನಲ್ಲಿದ್ದ ಮೀನುಗಾರರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೋಟುಗಳಿಗೆ ಹಾನಿಯಾಗಿವೆ. ಅದರ ಜತೆಯಲ್ಲಿಯೇ ನಾಡ ದೋಣಿ ಕೂಡ ಗಾಳಿ ಹೊಡೆತಕ್ಕೆ ಸಿಲುಕಿ ದಡಕ್ಕೆ ಬಂದು ಬಿದ್ದಿದೆ. ಆ ದೋಣಿ ಕೂಡ ಹಾನಿಯಾಗಿದೆ.

ಕಾರವಾರ ನಗರದ ಆರ್ ಟಿಓ ಕಚೇರಿ ಎದುರು ಇರುವ ಬೀಚ್ ನಲ್ಲಿ ಈ ಬೋಟುಗಳು ಬೀಡು ಬಿಟ್ಟಿವೆ.ಅರಬ್ಬಿ ಸಮುದ್ರದಲ್ಲಿ ತೂಫಾನ್ ಹೆಚ್ಚಾಗಿರುವುದರಿಂದ ಎಲ್ಲೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಕೆಲ ಮೀನುಗಾರರು ತೂಫಾನ್ ನಡುವೆಯೂ ಸಮುದ್ರಕ್ಕಿಳಿಯುವ ಸಾಹಸ ಮಾಡಿ ಅಪಾಯಕ್ಕೆ ಸಿಲುಕಿದೆ.

ಗಾಳಿಯ ಒತ್ತಡದ ನಡುವೆಯೂ ಸಮುದ್ರಕ್ಕಿಳಿದ ಹಲವು ಬೋಟುಗಳು ಕಾರವಾರ ಬಂದರಿನಲ್ಲಿ ಲಂಗರು ಹಾಕಿಕೊಂಡಿವೆ.ಕಳೆದೆರಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೋಟುಗಳೇ ಹೆಚ್ಚಾಗಿ ಇಂಥ ಸಮಸ್ಯೆಯಲ್ಲಿ ಸಿಲುಕಿಕೊಂಡಿವೆ. ಎರಡೇ ದಿನಗಳಲ್ಲಿ ಉಡುಪಿ, ಮಂಗಳೂರು ಸೇರಿ ಸುಮಾರು 4-5 ಬೋಟುಗಳು ಮುಳುಗಡೆಯಾಗಿವೆ.

ನಾಲ್ವರು ಮೀನುಗಾರರು ಬದುಕಿಗಾಗಿ ನಡೆಸಿದ ಹೋರಾಟ ಅಷ್ಟಿಷ್ಟಲ್ಲ. ಅವರನ್ನು ಕಾಪಾಡಲು ಮೀನುಗಾರರೇ ಸಮುದ್ರಕ್ಕಿಳಿಯುವ ಸಂದರ್ಭ ಸೃಷ್ಟಿಯಾಗಿತ್ತು.ಭಾನುವಾರ ಅಳ್ವೆಕೋಡಿಯಲ್ಲಿ ಮೀನುಗಾರಿಕೆಗೆ ತೆರಳಿ ಗಾಳಿಯ ಅಬ್ಬರದಿಂದ ಮೀನುಗಾರರು ದೋಣಿ ಬಿಟ್ಟು ಜೀವ ಉಳಿಸಿಕೊಂಡಿದ್ದಾರೆ. ಸಮುದ್ರದಲ್ಲೇ ದೋಣಿ ಬಿಟ್ಟು ದಡ ಸೇರಿದ ಮೀನುಗಾರರು

ಗಾಬರಿಗೊಂಡ ವಾಯು ವಿಹಾರಿಗಳು

ಬೆಳಗ್ಗೆ ವಾಯು ವಿಹಾರಕ್ಕೆ ಹೊರಟವರು ದಡದಲ್ಲಿ ಬಿದ್ದಿರುವ ಬೋಟುಗಳನ್ನು ನೋಡಿ ಭಯಭೀತರಾಗಿದ್ದಾರೆ. ಮಲ್ಪೆ ಮೂಲದ ಎರಡು ಬೋಟುಗಳು ಮನುಷ್ಯರೇ ಎಳೆತಂದು ನಿಲ್ಲಿಸಿದ ರೀತಿಯಲ್ಲಿ ದಡಕ್ಕೆ ಬಂದಿವೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ