Featured
ವಿಜಯಪುರದಲ್ಲಿ ಬೈಕ್- ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
![](https://risingkannada.com/wp-content/uploads/2020/08/vijayapura-accident.jpg)
ರೈಸಿಂಗ್ ಕನ್ನಡ :
ವಿಜಯಪುರ :
ಬೈಕಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರದ ಹೊರ ಭಾಗದ ಹಲಗಣಿ ರಸ್ತೆಯ ಬಸವಣ್ಣೆಪ್ಪ ಗುಡಿಯ ಬಳಿ ಸಂಭವಿಸಿದೆ.
ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದ ಸಂಗಯ್ಯಾ ಗುರುಬಸಯ್ಯಾ ಹಿರೇಮಠ (42) ಹಾಗೂ ಶಂಕರಯ್ಯಾ ಬಸಲಿಂಗಯ್ಯಾ ಮಠ (55) ಮೃತಪಟ್ಟ ದುರ್ದೈವಿಗಳು.
ಇವರು ಬಬಲೇಶ್ವರದಿಂದ ಶೇಗುಣಸಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ.
![Puradamma](https://risingkannada.com/wp-content/uploads/2020/08/Puradamma.jpg)
ಕಾರಿನಲ್ಲಿದ್ದ ವಿಜಯಪುರದ ಅಕ್ಷಯ ಹಾಗೂ ರಮೇಶಗೆ ಗಂಭೀರ ಗಾಯಗಳಾಗಿದ್ದು ಅವರನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮಖಂಡಿಯಿಂದ ವಿಜಯಪುರ ಕಡೆಗೆ ಕಾರು ಹೋಗುತ್ತಿತ್ತು.ಪೆಟ್ರೋಲ್ ಪಂಪಿನಲ್ಲಿ ಪೆಟ್ರೋಲ್ ಹಾಕಿಸಿ ಕೊಂಡು ಹೊರ ಬರುತ್ತಿದ್ದ ಬೈಕ್ ಸವಾರರಿಗೆ ಎದುರಿಗೆ ಬಂದ್ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಅಪಘಾತದ ಬಳಿಕ ಕಾರು ಪಲ್ಟಿಯಾಗಿದೆ.
ಕಾರಣ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?