Featured
ಸಿಎಂ ಬಿಎಸ್ವೈಗೂ ಪಾಠ ಕಲಿಸುತ್ತೇವೆ: ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಎಚ್ಚರ
ರೈಸಿಂಗ್ ಕನ್ನಡ:
ದಾವಣಗೆರೆ:
ಈಗಾಗಲೇ ವಾಲ್ಮೀಕಿ ಸಮಾಜ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಪಾಠ ಕಲಿಸಿದೆ. ಸಿಎಂ ಬಿಎಸ್ ವೈ ನುಡಿದಂತೆ ನಡೆಯದಿದ್ದರೇ ಬಿಜೆಪಿಗೂ ಪಾಠ ಕಲಿಸುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ.
ದಾವಣಗೆರೆ ಯಲ್ಲಿ ಮಾತನಾಡಿದ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ, ಈಗಾಗಲೇ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ನೀಡಿದೆ.
ವರದಿ ಬಂದ ತಕ್ಷಣ ಮೀಸಲಾತಿ ನೀಡುವುದಾಗಿ ಸಿಎಂ ಹೇಳಿದ್ದರು. ಆದ್ರೆ ಈಗ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ಕಾರಣ ನಾವು ಈಗಾಗಲೇ ರಾಜ್ಯದ 24 ಜಿಲ್ಲೆಗಳ ಪ್ರವಾಸ ಮಾಡಿದ್ದೇವೆ. ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಇದೇ 21 ರಿಂದ ವಿಧಾನಸೌಧದ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.
ಇದೇ ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಇದೆ. ಆ ಜಯಂತಿಯಲ್ಲಿ ಸಿಎಂ ಮೀಸಲಾತಿ ಬಗ್ಗೆ ಘೋಷಣೆ ಮಾಡಬೇಕು. ಮಾಡದಿದ್ದರೇ ಮುಂದಿನ ಹೋರಾಟ ರೂಪಿಸಲಾಗುವುದು ಸ್ವಾಮೀಜಿ ಎಚ್ಚರಿಸಿದರು.
ಸಿಎಂ ಸ್ಥಾನ ಕೇಳುತ್ತೇವೆ
ಈಗಾಗಲೇ ವಾಲ್ಮೀಕಿ ಸಮಾಜದವರಿಗೆ ಡಿಸಿಎಂ ಹುದ್ದೆ ನೀಡುವುದು ಮುಗಿದು ಹೋದ ವಿಚಾರ. ಇನ್ನು ಮುಂದಿನ ದಿನಗಳಲ್ಲಿ ವಾಲ್ಮೀಕಿ ಸಮಾಜದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಲಾಗುದು ಎಂದು ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?