Connect with us

ಕ್ರೀಡೆ

ಟಿ20 ಕ್ರಿಕೆಟ್​​ನ ಐತಿಹಾಸಿಕ ರೆಕಾರ್ಡ್​​ ಉಡೀಸ್ ಮಾಡಿದ ವಿರಾಟ್ ಕೊಹ್ಲಿ..! ​​

Cricket : ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಇದುವರೆಗೆ ಸುರೇಶ್ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಅಲ್ಲದೇ ಒಂದೇ ಪಂದ್ಯದಲ್ಲಿ ಸಾಲು ಸಾಲು ದಾಖಲೆಗಳನ್ನು ಬ್ರೇಕ್​ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆರಂಭಿಕ ಪಂದ್ಯಗಳಲ್ಲಿಯೇ ರೋಚಕ ಕದನಕ್ಕೆ ಸಾಕ್ಷಿಯಾಗಿದೆ. ಬಣ್ಣಗಳ ಹಬ್ಬ ಹೋಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಮೇಲೆ ನೆಟ್ಟಿತ್ತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಇದುವರೆಗೆ ಸುರೇಶ್ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಪಂಜಾಬ್​ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಜಾನಿ ಬೈರ್‌ಸ್ಟೋ ಅವರ ಕ್ಯಾಚ್‌ ಪಡೆಯುತ್ತಿದ್ದಂತೆ ಹೊಸ ದಾಖಲೆ ಬರೆದು.

ವಿರಾಟ್ ಕೊಹ್ಲಿ ಭಾರತ ಪರ ಟಿ20ಯಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಿಂದೆ ಸುರೇಶ್ ರೈನಾ ಹೆಸರು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದರೆ, ಮನೀಶ್ ಪಾಂಡೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಆದರೆ ಇದೀಗ 174 ಕ್ಯಾಚ್​​ ಪಡೆಯುವ ಮೂಲಕ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿರಾಟ್ ಕೊಹ್ಲಿ ಟಿ20ಯಲ್ಲಿ ಭಾರತದ ಪರ 174 ಕ್ಯಾಚ್‌ಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಈ ಮಾದರಿಯಲ್ಲಿ ಭಾರತ ಪರ ಸುರೇಶ್ ರೈನಾ 172 ಕ್ಯಾಚ್‌ಗಳನ್ನು ಪಡೆದಿದ್ದರು.

ರೋಹಿತ್ ಶರ್ಮಾ ಹೆಸರಿನಲ್ಲಿ 167 ಕ್ಯಾಚ್ ಪಡೆದ ದಾಖಲೆ ಇದೆ. ಮನೀಶ್ ಪಾಂಡೆ ಟಿ20ಯಲ್ಲಿ ಇದುವರೆಗೆ ಒಟ್ಟು 146 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್‌ನ ಸೂರ್ಯಕುಮಾರ್ ಯಾದವ್ ಇದುವರೆಗೆ 136 ಕ್ಯಾಚ್‌ಗಳನ್ನು ಪಡೆದಿದ್ದಾರೆ.

Advertisement

ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಟಿ20ಯಲ್ಲಿ 100ನೇ ಐವತ್ತು ಪ್ಲಸ್ ಸ್ಕೋರ್ ದಾಖಲಿಸಿದ್ದಾರೆ. ಕೊಹ್ಲಿ ಪಂಜಾಬ್​ ಕಿಂಗ್ಸ್​​​​ ವಿರುದ್ಧ 31 ಎಸೆತಗಳಲ್ಲಿ ಐಪಿಎಲ್‌ನಲ್ಲಿ ತಮ್ಮ 51ನೇ ಅರ್ಧಶತಕವನ್ನು ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ 8 ಶತಕ ಮತ್ತು 92 ಅರ್ಧಶತಕಗಳನ್ನು ಗಳಿಸಿದ್ದಾರೆ.

ಈ ಪೈಕಿ 1 ಶತಕ ಮತ್ತು 37 ಅರ್ಧಶತಕಗಳು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬಂದಿವೆ. ಕ್ರಿಸ್ ಗೇಲ್ 110 ಬಾರಿ ಐವತ್ತು ಪ್ಲಸ್ ರನ್​ ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ, ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತು ಇದೀಗ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಕೊಹ್ಲಿ ಪ್ರತಿ ಪಂದ್ಯದಲ್ಲಿಯೂ ದಾಖಲೆಗಳ ಸುರಿಮಳೆಗೈಯುತ್ತಿದ್ದಾರೆ.

ಚಿನ್ನಸ್ವಾಮಿ ಮೈದಾನದ ಮೂಲೆಮೂಲೆಗೂ ಬೌಂಡರಿ ಚಚ್ಚಿದ ವಿರಾಟ್ ಕೊಹ್ಲಿ ಪಂಜಾಬ್​ ಕಿಂಗ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್​ ಮಾಡಿದರು. ಕೊಹ್ಲಿ ಅಂತಿಮವಾಗಿ ಪಂಜಾಬ್ ವಿರುದ್ಧ ಕೇವಲ 49 ಎಸೆತದಲ್ಲಿ 2 ಸಿಕ್ಸ್​ ಮತ್ತು 11 ಫೋರ್​ ಮೂಲಕ 77 ರನ್​ ಸಿಡಿಸಿ ಹರ್ಷಲ್​ ಪಟೇಲ್​ ಬೌಲಿಂಗ್​ ನಲ್ಲಿ ಕ್ಯಾಚಿತ್ತು ಔಟ್​​ ಆದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ