Cricket : ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಇದುವರೆಗೆ ಸುರೇಶ್ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಅಲ್ಲದೇ ಒಂದೇ ಪಂದ್ಯದಲ್ಲಿ ಸಾಲು ಸಾಲು ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆರಂಭಿಕ ಪಂದ್ಯಗಳಲ್ಲಿಯೇ ರೋಚಕ ಕದನಕ್ಕೆ ಸಾಕ್ಷಿಯಾಗಿದೆ. ಬಣ್ಣಗಳ ಹಬ್ಬ ಹೋಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಮೇಲೆ ನೆಟ್ಟಿತ್ತು.
ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಇದುವರೆಗೆ ಸುರೇಶ್ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಜಾನಿ ಬೈರ್ಸ್ಟೋ ಅವರ ಕ್ಯಾಚ್ ಪಡೆಯುತ್ತಿದ್ದಂತೆ ಹೊಸ ದಾಖಲೆ ಬರೆದು.
ವಿರಾಟ್ ಕೊಹ್ಲಿ ಭಾರತ ಪರ ಟಿ20ಯಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಿಂದೆ ಸುರೇಶ್ ರೈನಾ ಹೆಸರು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದರೆ, ಮನೀಶ್ ಪಾಂಡೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಆದರೆ ಇದೀಗ 174 ಕ್ಯಾಚ್ ಪಡೆಯುವ ಮೂಲಕ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿರಾಟ್ ಕೊಹ್ಲಿ ಟಿ20ಯಲ್ಲಿ ಭಾರತದ ಪರ 174 ಕ್ಯಾಚ್ಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಕ್ಯಾಚ್ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಈ ಮಾದರಿಯಲ್ಲಿ ಭಾರತ ಪರ ಸುರೇಶ್ ರೈನಾ 172 ಕ್ಯಾಚ್ಗಳನ್ನು ಪಡೆದಿದ್ದರು.
ರೋಹಿತ್ ಶರ್ಮಾ ಹೆಸರಿನಲ್ಲಿ 167 ಕ್ಯಾಚ್ ಪಡೆದ ದಾಖಲೆ ಇದೆ. ಮನೀಶ್ ಪಾಂಡೆ ಟಿ20ಯಲ್ಲಿ ಇದುವರೆಗೆ ಒಟ್ಟು 146 ಕ್ಯಾಚ್ಗಳನ್ನು ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್ನ ಸೂರ್ಯಕುಮಾರ್ ಯಾದವ್ ಇದುವರೆಗೆ 136 ಕ್ಯಾಚ್ಗಳನ್ನು ಪಡೆದಿದ್ದಾರೆ.
ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಟಿ20ಯಲ್ಲಿ 100ನೇ ಐವತ್ತು ಪ್ಲಸ್ ಸ್ಕೋರ್ ದಾಖಲಿಸಿದ್ದಾರೆ. ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 31 ಎಸೆತಗಳಲ್ಲಿ ಐಪಿಎಲ್ನಲ್ಲಿ ತಮ್ಮ 51ನೇ ಅರ್ಧಶತಕವನ್ನು ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಕೊಹ್ಲಿ 8 ಶತಕ ಮತ್ತು 92 ಅರ್ಧಶತಕಗಳನ್ನು ಗಳಿಸಿದ್ದಾರೆ.
ಈ ಪೈಕಿ 1 ಶತಕ ಮತ್ತು 37 ಅರ್ಧಶತಕಗಳು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬಂದಿವೆ. ಕ್ರಿಸ್ ಗೇಲ್ 110 ಬಾರಿ ಐವತ್ತು ಪ್ಲಸ್ ರನ್ ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ, ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತು ಇದೀಗ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಕೊಹ್ಲಿ ಪ್ರತಿ ಪಂದ್ಯದಲ್ಲಿಯೂ ದಾಖಲೆಗಳ ಸುರಿಮಳೆಗೈಯುತ್ತಿದ್ದಾರೆ.
ಚಿನ್ನಸ್ವಾಮಿ ಮೈದಾನದ ಮೂಲೆಮೂಲೆಗೂ ಬೌಂಡರಿ ಚಚ್ಚಿದ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದರು. ಕೊಹ್ಲಿ ಅಂತಿಮವಾಗಿ ಪಂಜಾಬ್ ವಿರುದ್ಧ ಕೇವಲ 49 ಎಸೆತದಲ್ಲಿ 2 ಸಿಕ್ಸ್ ಮತ್ತು 11 ಫೋರ್ ಮೂಲಕ 77 ರನ್ ಸಿಡಿಸಿ ಹರ್ಷಲ್ ಪಟೇಲ್ ಬೌಲಿಂಗ್ ನಲ್ಲಿ ಕ್ಯಾಚಿತ್ತು ಔಟ್ ಆದರು.
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!