Featured
ನಾರಾಯಾಣಪುರ ಜಲಾಶಯ ಭರ್ತಿ ಹಿನ್ನಲೆ: ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ
![](https://risingkannada.com/wp-content/uploads/2020/07/yadgiri-krishna-dam-2.jpg)
ರೈಸಿಂಗ್ ಕನ್ನಡ :
ಯಾದಗಿರಿ:
ಮಳೆಗಾಲ ಆರಂಭವಾಗುತ್ತಿದ್ದಂತೆ ಕೃಷ್ಣಾ ನದಿ ತೀರದ ಜನರಿಗೆ ಆತಂಕ ಶುರುವಾಗಿದೆ. ಕಳೆದ ಏಳು ತಿಂಗಳಿಂದ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿತ್ತು.
ಈಗ ಮತ್ತೊಮ್ಮೆ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಪ್ರವಾಹ ಉಂಟಾಗುವ ಮುನ್ಸೂಚನೆ ಎದುರಾಗಿದೆ. ಈಗಾಗಲೇ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯ ಭರ್ತಿಯಾಗಿದ್ದು, ಜಲಾಶಯ ದಿಂದ ನಾಲ್ಕು ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಬಿಡಲಾಗಿದೆ.
![](https://risingkannada.com/wp-content/uploads/2020/07/yadgiri-krishna-dam.jpg)
ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಳಗಾವಿ ಸೇರಿದಂತೆ ಇತರ ಕಡೆ ಭಾರಿ ಮಳೆ ಆಗ್ತಿದ್ದು ಮತ್ತೊಮ್ಮೆ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಒಟ್ಟು ನಾಲ್ಕು ಗೇಟ್ ಮೂಲಕ ನೀರು ಹೊರಕ್ಕೆ ಬಿಡಲಾಗಿದ್ದು, ಒಟ್ಟು 22,860 ಸಾವಿರ ಕ್ಯೂಸೆಕ್ ನೀರು ಜಲಾಶಯದಿಂದ ಕೃಷ್ಣಾ ನದಿಗೆ ಬಿಡಲಾಗಿದೆ. ನದಿ ತೀರದ ಜನರು ಹೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?