Featured
ಭೀಮಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ – ಸೊನ್ನ ಬ್ಯಾರೇಜಿನಿಂದ ನದಿಗೆ ನೀರು..!
![](https://risingkannada.com/wp-content/uploads/2020/07/WhatsApp-Image-2020-07-18-at-5.46.37-PM.jpeg)
ರೈಸಿಂಗ್ ಕನ್ನಡ :
ಪ್ರತಿನಿಧಿ, ವಿಶ್ವಕುಮಾರ್, ಕಲಬುರಗಿ :
ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಅಫ್ಜಲ್‌ಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದೆ. ಅದರಂತೆ ಶನಿವಾರ ಬ್ಯಾರೇಜಿನಿಂದ 4000 ಕ್ಯೂಸೆಕ್ ನೀರನ್ನ ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.
![](https://risingkannada.com/wp-content/uploads/2020/07/WhatsApp-Image-2020-07-18-at-5.46.36-PM.jpeg)
ಬ್ಯಾರೇಜಿಗೆ ಒಳಹರಿವಿನ ನೀರಿನ ಪ್ರಮಾಣ 4000 ಕ್ಯೂಸೆಕ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ. ಆದರಿಂದ ನದಿ ದಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸುತ್ತಮುತ್ತಲಿನ ಪ್ರದೇಶದ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ.ಎಂ.ಸಿ. ಇದ್ದು, ಶನಿವಾರ ಬೆಳಿಗ್ಗೆ 2.74 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ ಎಂದರು. ಜುಲೈ ಮಾಸಾಂತ್ಯ ಮತ್ತು ಆಗಸ್ಟ್ ಮಾಹೆಯಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದ್ದು, ಆಗ ನೀರಿನ ಒಳಹರಿವು ಇನ್ನು ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 4000 ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗಿದೆ ಎಂದು ಅಶೋಕ ಆರ್. ಕಲಾಲ್ ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?