Featured
ಭೂ ಸ್ವಾಧೀನ: ಕಾಲಮಿತಿಯಲ್ಲಿ ಯೋಜನೆ ಪೂರ್ಣಕ್ಕೆ ಸಚಿವ ರಮೇಶ್ ಜಾರಕಿಹೊಳಿಯಿಂದ ಭರವಸೆ
![](https://risingkannada.com/wp-content/uploads/2020/09/hassan-1.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಗುರುವಾರ ಚರ್ಚೆ ನಡೆಸಿದರು.
ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು ಚರ್ಚೆ ನಡೆಸಿದರು.
ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು ಮೊದಲ ಹಂತದ ಕಾಮಗಾರಿಗಳು ಮುಂದಿನ ಮೇ ತಿಂಗಳ ಒಳಗೆ ಪೂರ್ಣಗೊಳ್ಳಲಿದೆ. ರೈತರು ಮತ್ತು ಜನಪ್ರತಿನಿಧಿಗಳು ಪಕ್ಷ ಭೇದ ಮರೆತು ಸಹಕರಿಸಿದಲ್ಲಿ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ತಿಳಿಸಿದರು.
ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್, ವಿ.ಜೆ.ಎನ್. ಎಲ್. ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ ರಾವ್ ಪೇಶ್ವೆ, ರೈತ ಮುಖಂಡ ಸುರೇಂದ್ರ, ಕಾಫಿ ಬೆಳೆಗಾರರ ಸಂಘದ ಕೃಷ್ಣಪ್ಪ ಸೇರಿದಂತೆ ಹಾಸನ ಮತ್ತು ಸಕಲೇಶಪುರದ ರೈತರು ಪಾಲ್ಗೊಂಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?