Connect with us

ಬೆಂಗಳೂರು

ಶೀಘ್ರ ದುಷ್ಕರ್ಮಿಗಳನ್ನು ಸೆರೆ ಹಿಡಿಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟಕ್ಕೆ ಕಾರಣರಾಗಿರುವ ದುಷ್ಕರ್ಮಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸ್ಫೋಟ ನಡೆದ ಕೋರಮಂಗಲದ ರಾಮೇಶ್ವರಂ ಕೆಫೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು.

“ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದೊಂದು ಅಲ್ಪ ತೀವ್ರತೆ ಸ್ಫೋಟವಾಗಿದೆ. ಈ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಬಾಂಬ್ ನಿಗ್ರಹ ದಳ, ಎಫ್ ಎಸ್ ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಈ ಪ್ರಕರಣದ ತನಿಖೆಗೆ 7-8 ತಂಡಗಳನ್ನು ನೇಮಿಸಲಾಗಿದೆ.

ಈ ಸ್ಫೋಟದಲ್ಲಿ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನ ನಾಗರೀಕರು ಗಾಬರಿಯಾಗುವ ಅಗತ್ಯವಿಲ್ಲ. ಈ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದು, ತನಿಖಾಧಿಕಾರಿಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.” ಬಿಜೆಪಿ ನಾಯಕರು ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರು ಏನಾದರೂ ಟೀಕೆ, ಆರೋಪ ಮಾಡಲಿ. ನಾವು ನಮ್ಮ ನಗರ ಹಾಗೂ ರಾಜ್ಯದ ಘನತೆ ರಕ್ಷಣೆ ಮಾಡಲು ಪ್ರಯತ್ನಿಸುತ್ತೇವೆ.

ಅವರ ಅಧಿಕಾರ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣದ ರೂವಾರಿಗಳನ್ನು ಸೆರೆ ಹಿಡಿಯುತ್ತೇವೆ. ಪೊಲೀಸರು ಕಾನೂನು ಪಾಲನೆ ಮಾಡಲಿದ್ದಾರೆ. ಬೆಂಗಳೂರಿನ ಎಲ್ಲೆಡೆ ಕ್ಯಾಮೆರಾಗಳಿದ್ದು ಆದಷ್ಟು ಬೇಗ ಇವರನ್ನು ಪತ್ತೆ ಹಚ್ಚುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ