Featured
ಮಗನ ಜೊತೆ ನಡ್ಡಾ, ರಾಜನಾಥ್ ಭೇಟಿಯಾದ ಯಡಿಯೂರಪ್ಪ : ಬದಲಾವಣೆ ಮುನ್ಸೂಚನೆನಾ.?
ರೈಸಿಂಗ್ ಕನ್ನಡ : ನವದೆಹಲಿ
ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ರು. ಸುಮಾರು 10 ನಿಮಿಷಗಳ ಭೇಟಿಯಲ್ಲಿ ರಾಜ್ಯದ ಅಭಿವೃದ್ಧಿ, ಕೊರೋನಾ ವಿಚಾರವಾಗಿ ಚರ್ಚೆ ನಡೆಸಿದ್ದಾಗಿ ಸಿಎಂ ಬಿಎಸ್ವೈ ಹೇಳಿದ್ರು. ಆದ್ರೆ, ದಿಲ್ಲಿ ಮಾಧ್ಯಮಗಳಲ್ಲಿ ಆಗ್ತಿರೋ ಸುದ್ದಿನೇ ಬೇರೆ. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಅಂದ್ರೆ, ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಿದ್ದಾರೆ ಅನ್ನೋ ಸದ್ದು ಜೋರಾಗಿನೇ ಆಗ್ತಿದೆ.
ಈ ನಡುವೆ, ಇವತ್ತು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹಲವು ಬಿಜೆಪಿ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ವಿಶೇಷ ಅಂದ್ರೆ, ಸಿಎಂ ಭೇಟಿ ವೇಳೆ ತಮ್ಮ ಪುತ್ರ ವಿ.ವೈ. ವಿಜಯೇಂದ್ರ ಕೂಡ ಉಪಸ್ಥಿತರಿದ್ದಾರೆ. ಸಾಮಾನ್ಯವಾಗಿ ಸಿಎಂ ಹೈಕಮಾಂಡ್ ನಾಯಕರ ಭೇಟಿಗೆ ಹೋದಾಗ ಒಬ್ಬೋ ಅಥವಾ ಪಕ್ಷದ ಅಧ್ಯಕ್ಷರು ಮತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಹೋಗ್ತಾರೆ. ಆದ್ರೆ, ಯಡಿಯೂರಪ್ಪ ಮಾತ್ರ ತಮ್ಮ ಪುತ್ರ ವಿಜಯೇಂದ್ರ ಜೊತೆಯಲ್ಲಿ ಹೋಗಿರೋದು ಸಾಕಷ್ಟು ರೆಕ್ಕೆ-ಪುಕ್ಕ ಬರೋಕೆ ಕಾರಣವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ರನ್ನ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಮುಂದಿನ ಚುನಾವಣೆಯಲ್ಲೂ ಬಿಜೆಪಿಯನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನೋಡೋಣ, ಮುಂದಿನ ದಿನಗಳಲ್ಲಿ ಸಿಎಂ ದೆಹಲಿಯ ಭೇಟಿಯ ಗುಟ್ಟು ರಟ್ಟಾಗುತ್ತೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?