Connect with us

Featured

ಆಷಾಢದ ಬಗ್ಗೆ ಜನರಿಗೆ ಭಯ ಏಕೆ..? ಶುಭವೋ..?ಅಶುಭವೋ..?

ರೈಸಿಂಗ್​ ಕನ್ನಡ:

ಬೆಂಗಳೂರು:

ಆಷಾಢ ಮಾಸ ಒಳ್ಳೆಯದೋ ಕಟ್ಟದ್ದೋ..? ಶಾಸ್ತ್ರಗಳನ್ನು ನಂಬುವವರಿಗೆ ಆಷಾಢ ಒಳ್ಳೆಯದಲ್ಲ. ಶಾಸ್ತ್ರಗಳನ್ನು ಬದನೆಕಾಯಿ ಅನ್ನುವವರಿಗೆ ಎಲ್ಲಾ ಮಾಸವೂ ಒಂದೇ. ಆದ್ರೆ ಎಲ್ಲಾ ಆಚರಣೆಗಳಿಗೂ ಒಂದೊಂದು ಕಾರಣವಿರುತ್ತದೆ. ಸುಖಾಸುಮ್ಮನೆ ಆಚರಣೆಗಳೂ ಆಚಾರಕ್ಕೆ ಬಂದಿರುವುದಿಲ್ಲ. ಕಾಲಕ್ಕೆ ತಕ್ಕಹಾಗೇ ಬದಲಾವಣೆಗಳನ್ನು ಮಾಡಿಕೊಳ್ಳುವುದು ಕೂಡ ಉತ್ತಮ.

Advertisement

ಈಗ ಆಷಾಢ ಮಾಸದ ವಿಚಾರಕ್ಕೆ ಬರೋಣ. ಆಷಾಢ ಮಾಸ ಅಶುಭ ಎಂದು ಯಾವ ಶಾಸ್ತ್ರದಲ್ಲೂ ಉಲ್ಲೇಖವಿಲ್ಲ ಬಹುತೇಕ ಹಿಂದೂಗಳಲ್ಲಿ ಆಷಾಢ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿ ಬಿಟ್ಟಿದೆ. ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರು ಅವು ಫಲ ನೀಡುವುದಿಲ್ಲ ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳಿಗೆ ಮನ್ನಣೆ ಇಲ್ಲ. ಆದರೆ ಒಂದು ಮಾತು ಆಷಾಢ ಮಾಸ ಅಶುಭ ಮಾಸ ಎಂದು ಯಾವ ಶಾಸ್ತ್ರಗಳಲ್ಲೂ ಉಲ್ಲೇಖಿಸಿಲ್ಲ.

ಆಷಾಢ ಮಾಸ ಪ್ರಾರಂಭವಾದ ನಂತರ ಶುಭ ಕಾರ್ಯಗಳಾದ ಮದುವೆಯ ಮಾತುಕತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇಧವಾಗುವುದು. ಇದಕ್ಕೆ ಮುಖ್ಯವಾಗಿ ಕಾರಣ ನೂರಾರು. ವರ್ಷಗಳ ಹಿಂದೆ ಆಷಾಢ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತಿತ್ತು. ಮನೆಯಿಂದ ಹೊರಗೆ ಹೋಗುವುದೇ ಬಹಳ ಕಷ್ಟಕರವಾಗಿರುತ್ತಿತ್ತು. ಈ ರೀತಿ ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿತ್ತು. ಈ ಎಲ್ಲಾ ಕಾರಣಗಳಿಂದ ಹೊರಗಿನ ಕೆಲಸಗಳು ಕುಂಟಿತವಾಗುತ್ತಿದ್ದವು. ರೈತರಿಗೆ ಹೊಲ ಗದ್ದೆಗಳಲ್ಲಿ ವಿಪರೀತ ಕೆಲಸ ಕಾರ್ಯಗಳು ಇರುತ್ತಿತ್ತು. ಈ ಕಾರಣಗಳಿಂದ ಬೇರೆ ವ್ಯವಹಾರಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಈ ಎಲ್ಲಾ ಕಾರಣಗಳಿಂದ ಆಷಾಢಮಾಸದಲ್ಲಿ ಶುಭ ಕಾರ್ಯ ಮಾಡಲು ಅನಾನುಕೂಲವಾಗಿದ್ದರಿಂದ ಶುಭಕಾರ್ಯ ಮಾಡುವುದನ್ನು ನಿಷೇಧಿಸಿದ್ದರು.

ಮದುವೆಯಾದ ಹೊಸ ವರ್ಷದಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಕೂಡಿ ಒಂದೇ ಮನೆಯಲ್ಲಿ ವಾಸಿಸುವುದು ನಿಷೇಧ ಎಂದು ಕೆಲವು ಕಡೆ ಪದ್ಧತಿ ಇದೆ. ಆಷಾಢದಲ್ಲಿ ಮಳೆ ಹೆಚ್ಚು ಇರುವುದರಿಂದ ಹೊಲ ಗದ್ದೆಗಳಲ್ಲಿ ಮತ್ತು ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಿರುತ್ತವೆ. ಅತ್ತೆಯಾದವರು ಸೊಸೆಗೆ ಹೆಚ್ಚು ಕೆಲಸದ ಒತ್ತಡ ತರ ಬಹುದು, ಇದರಿಂದ ಅವರಿಬ್ಬರಲ್ಲಿ ವೈಮನಸ್ಸುವುಂಟಾಗಿ ಜಗಳಕ್ಕೆ ಕಾರಣ ಆಗ ಬಹುದು ಎಂದು ಒಂದು ತಿಂಗಳ ಕಾಲ ತವರು ಮನೆಗೆ ಕಳಿಸುವ ಸಂಪ್ರದಾಯ ಬಂದಿರಬೇಕು ಅನ್ನುವ ವಾದ ಇದ್ದೇ ಇದೆ.

ಅಮರನಾಥದ ಹಿಮಲಿಂಗ ದರ್ಶನ ಪ್ರತಿ ವರ್ಷ ಆರಂಭವಾಗುವುದು ಈ ಸಮಯದಲ್ಲೇ. ಪ್ರಥಮ ಏಕಾದಶಿ ವ್ರತ ಆರಾಧನೆ ಬರುವುದು ಆಷಾಢದಲ್ಲಿ. ಶಿವ ಪಾರ್ವತಿಗೆ ಅಮರತ್ವದ ರಹಸ್ಯ ಹೇಳಿರುವುದು, ಗಂಗೆ ಭೂಮಿಗೆ ಉತ್ತರಾಭಿಮುಖವಾಗಿ ಹರಿದು ಬಂದಿದ್ದು ಇದೇ ಮಾಸದಲ್ಲಿ. ಮಹಾ ಪತಿವ್ರತೆ ಅನುಸೂಯಾ ದೇವಿ ನಾಲ್ಕು ಸೋಮವಾರ ಶಿವ ವ್ರತ ಮಾಡಿದ್ದು ಇದೇ ಆಷಾಡದಲ್ಲಿ ಮಾಸದಲ್ಲಿ. ಆಷಾಡದ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.

ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ ಎಂಬ ಉಲ್ಲೇಖವಿದೆ. ಇಂದ್ರನು ಗೌತಮರಿಂದ ಸಹ ಸಾಕ್ಷನಾಗು ಎಂಬ ಶಾಪ ಪಡೆದ ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ ಸೋಮೇಶ್ವರ ಜಯಂತಿ ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದಿರುವುದಾಗಿ ಪುರಾಣಗಳು ಹೇಳುತ್ತವೆ. ಸುಮಂಗಲಿಯರು ದೀರ್ಘ ಕಾಲದ ಮಾಂಗಲ್ಯ ಪಾಪ್ತಿಗಾಗಿ ಆಷಾಢ ಮಾಸದ ಅಮಾವಾಸ್ಯೆಯ ಸಂಜೆ ಜ್ಯೋತಿ ಭೀಮೇಶ್ವರ ವ್ರತವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಆಷಾಢ ಹುಣ್ಣಿಮೆ ದಿನ ಗುರು ಪೂರ್ಣಿಮೆಯನ್ನು ಎಲ್ಲಾ ಮಠ ಮಂದಿರಗಳಲ್ಲಿ ಆಚರಿಸಿ ಚಾತುರ್ಮಾಸ್ಯ ವ್ರತವನ್ನು ಪ್ರಾರಂಭ ಮಾಡುತ್ತಾರೆ. ಆಷಾಢದ ಶುಕ್ಲ ಪಕ್ಷದ ಪಂಚಮಿ ದಿನದಂದು ಅಮೃತ ಲಕ್ಷ್ಮೀ ವ್ರತವನ್ನು ಮಹಿಳೆಯರು ಭಕ್ತಿಯಿಂದ ಆಚರಿಸುತ್ತಾರೆ. ಈ ಎಲ್ಲಾ ಮಹತ್ವಗಳು ಆಷಾಢ ಮಾಸದಲ್ಲಿ ಇರುವುದರಿಂದ ಈ ಮಾಸವೂ ಸಹ ವಿಶೇಷವೇ ಆಗಿದೆ. ಇನ್ನೊಂದು ವಿಶೇಷ ಎಂದರೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಜನ್ಮ ದಿನ ಬರುವುದು ಈ ಆಷಾಡ ಮಾಸದಲ್ಲೇ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ